ತಪಾಸಣೆ ವೇಳೆ ತಪ್ಪಿಸಿಕೊಂಡು ಹೋಗಲು ಯತ್ನಿಸಿದ ಇಬ್ಬರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ವಾಹನ ತಪಾಸಣೆ ವೇಳೆ ತಪ್ಪಿಸಿಕೊಂಡು ಹೋಗಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬೆನ್ನಟ್ಟಿ ಹಿಡಿದು ಬಂಧಿಸಿ ವಾಹನಗಳ ಕಳ್ಳತನ ಪ್ರಕರಣಗಳನ್ನು ಬಯಲಿಗೆಳೆದಿದ್ದಾರೆ. ಮೂಲತಃ ತಮಿಳುನಾಡಿನ ಹೊಸೂರು ನಿವಾಸಿಗಳಾದ ಡೇವಿಡ್ ಅರ್ಜುನ್ ಮಣಿಕೋದಂಡ ಮತ್ತು ಮುನ್ನಾ ಕೊಟ್ಟಿಯಾನ್ ಬಂಧಿತ ವಾಹನ ಚೋರರು.

ನ.25ರಂದು ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ವಾಹನ ತಪಾಸಣೆ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಅಶೋಕ್ ಲೇಲ್ಯಾಂಡ್ ಮಿನಿ ದೋಸ್ತ್ ಲಗೇಜ್ ಗಾಡಿ ಬರುತ್ತಿರುವುದನ್ನು ಗಮನಿಸಿದ್ದಾರೆ.

ಪೆÇಲೀಸರನ್ನು ಕಂಡು ಆರೋಪಿಗಳು ವಾಹನ ತಿರುಗಿಸಿಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ತಕ್ಷಣ ಬೆನ್ನಟ್ಟಿ ವಾಹನ ಸಮೇತ ಇಬ್ಬರನ್ನು ಬಂಸಿ ವಿಚಾರಣೆಗೊಳಪಡಿಸಿದರು. ಇನ್‍ಸ್ಪೆಕ್ಟರ್ ಪ್ರಶಾಂತ್ ಹಾಗೂ ಸಿಬ್ಬಂದಿ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ, ತುಮಕೂರಿನ ತಿಲಕ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಶೋಕ್ ಲೇಲ್ಯಾಂಡ್ ಮಿನಿ ದೋಸ್ತ್ ಲಾರಿ ಮತ್ತು ಕೋಳಾಲ ವ್ಯಾಪ್ತಿಯಲ್ಲಿ ಬೊಲೆಎರೋ ವಾಹನ ಹಾಗೂ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾಯಲ್ ಎನ್‍ಫೀಲ್ಡ್ ದ್ವಿಚಕ್ರ ವಾಹನ ಕಳವು ಮಾಡಿರುವುದಾಗಿ ತಿಳಿಸಿದ್ದಾರೆ.

ಆರೋಪಿಗಳು ನೀಡಿದ ಹೇಳಿಕೆ ಮೇರೆಗೆ 11.20 ಲಕ್ಷ ಬೆಲೆಯ ಮೂರು ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಕಾಮಾಕ್ಷಿಪಾಳ್ಯ ಠಾಣೆ ಪೆÇಲೀಸರು ಯಶಸ್ವಿಯಾಗಿದ್ದಾರೆ.

Facebook Comments