ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.29- ನೈಜೀರಿಯಾ ದೇಶದ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಮಾದಕವಸ್ತು ಖರೀದಿಸಿ ನಗರದಲ್ಲಿ ಐಟಿ ಬಿಟಿ ಉದ್ಯೋಗಿಗಳಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 30 ಲಕ್ಷ ರೂ. ಮೌಲ್ಯದ ಮಾದಕವಸ್ತುಗಳಾದ ಎಂಡಿಎಂಎ, ಕ್ರಿಸ್ಟಲ್, ಚರಸ್ ಮತ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಇಬ್ಬರು ಡ್ರಗ್ ಪೆಡ್ಲರ್ಗಳು ನೈಜೀರಿಯಾ ದೇಶದ ವ್ಯಕ್ತಿಯೊಬ್ಬನಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ ಅವುಗಳನ್ನು ಹೆಚ್ಚಿನ ಬೆಲೆಗೆ ನಗರದ ಐಟಿಬಿಟಿ ಉದ್ಯೋಗಿಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸ್ಥಳೀಯರಿಗೆ ಮಾರಾಟ ಮಾಡುವ ಕೃತ್ಯದಲ್ಲಿ ತೊಡಗಿದ್ದರು.

ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಸ್ಥಳದ ಮೇಲೆ ದಾಳಿ ಮಾಡಿ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಸುವಲ್ಲಿ ಯಶಸ್ವಿಯಾಗಿರುತ್ತಾರೆ.

ವಿಚಾರಣೆ ವೇಳೆ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ಮಾಡಿರುವುದು ತಿಳಿದುಬಂದಿರುತ್ತದೆ. ಆರೋಪಿಗಳ ವಿರುದ್ಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಕಾರ್ಯಾಚರಣೆಯನ್ನು ಜಂಟಿ ಪೊಲೀಸ್ ಆಯುಕ್ತ ಹಾಗೂ ಉಪಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಗೌತಮ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಅಶೋಕ್ ಅವರನ್ನೊಳಗೊಂಡ ತಂಡ ಕೈಗೊಂಡಿತ್ತು.

Facebook Comments

Sri Raghav

Admin