ಕಾಶ್ಮೀರದ ಪುಲ್ವಾಮಾದಲ್ಲಿ ಬೆಳ್ಳಂಬೆಳಿಗ್ಗೆ ಮೂವರು ಉಗ್ರರನ್ನು ಬೇಟಿಯಾಡಿದ ಯೋಧರು..!

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ, ಏ.25- ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಲಾಕ್‍ಡೌನ್ ಸಂದರ್ಭದ ದುರ್ಲಾಭ ಪಡೆದು ವಿಧ್ವಂಸಕ ಕೃತ್ಯಗಳಿಗೆ ಮುಂದಾಗುತ್ತಿರುವ ಉಗ್ರರ ಯತ್ನಗಳನ್ನು ಭದ್ರತಾ ಪಡೆಗಳು ವಿಫಲಗೊಳಿಸುತ್ತಿವೆ.ಆಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ನಸುಕಿನಲ್ಲಿ ಯೋಧರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮೂರು ಉಗ್ರರು ಹತರಾಗಿದ್ದಾರೆ. ಮೃತ ಉಗ್ರಗಾಮಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ವಾರದಲ್ಲಿ ಯೋಧರು ಉಗ್ರರನ್ನು ಸದೆಬಡಿದ ಎರಡನೆ ಪ್ರಕರಣ ಇದಾಗಿದೆ. ಲಾಕ್‍ಡೌನ್ ವೇಳೆ ಎನ್‍ಕೌಂಟರ್‍ನಲ್ಲಿ ಮೃತಪಟ್ಟ ಭಯೋತ್ಪಾದಕರ ಸಂಖ್ಯೆ ಇದರೊಂದಿಗೆ 20ಕ್ಕೇರಿದೆ. ದಕ್ಷಿಣ ಕಾಶ್ಮೀರದ ಅವಂತಿಪೊರದ ಗೋರಿಪೊರಾ ನಿರ್ಜನ ಪ್ರದೇಶದಲ್ಲಿ ಉಗ್ರಗಾಮಿಗಳು ಅವಿತಿಟ್ಟುಕೊಂಡಿದ್ದಾರೆ ಎಂಬ ಖಚಿತು ಸುಳಿವಿನ ಮೇರೆಗೆ ಯೋಧರು ನಿನ್ನೆ ರಾತ್ರಿ ಆ ಪ್ರದೇಶವನ್ನು ಸುತ್ತುವರಿದು ಶೋಧ ನಡೆಸುತ್ತಿದ್ದರು.

ಇಂದು ಮೂಂಬಾನೆ ಆತಂಕವಾದಿಗಳು ಯೋಧರತ್ತ ಗುಂಡು ಹಾರಿಸಿದಾಗ ಎನ್‍ಕೌಂಟರ್ ನಡೆಯಿತು. ಈ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಮತ್ತು ಅವರ ಆಪ್ತ ಸಹಾಯಕ ಹತರಾದರು. ಮೃತ ಭಯೋತ್ಪಾದಕರಿಂದ ಕಲಾಷ್ನಿಕೋವ್ ರೈಫಲ್‍ಗಳು, ಬುಲೆಟ್‍ಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉನ್ನತ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಶ್ಮೀರದಲ್ಲಿ ಈ ವರ್ಷದಲ್ಲಿ ಇಲ್ಲಿಯವರೆಗೆ ಭದ್ರತಾ ಪಡೆಗಳು ನಡೆಸಿದ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗಳಲ್ಲಿ 50 ಉಗ್ರರು ಹತರಾಗಿದ್ದಾರೆ. ಕಣಿವೆಯಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಟದಲ್ಲಿ 17 ಯೋಧರು ಹುತಾತ್ಮರಾಗಿದ್ದಾರೆ.

ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ 9 ನಾಗರಿಕರೂ ಸಹ ಉಗ್ರರ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಒಂದು ತಿಂಗಳ ಲಾಕ್‍ಡೌನ್ ಅವಧಿಯಲ್ಲಿ ಒಟ್ಟು 18 ಉಗ್ರರನ್ನು ಭಧ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Facebook Comments

Sri Raghav

Admin