ಕಾಶ್ಮೀರದಲ್ಲಿ ಇಬ್ಬರು ಉಗ್ರರ ಎನ್ಕೌಂಟರ್

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ, ಅ.11-ಜಮ್ಮು-ಕಾಶ್ಮೀರದಲ್ಲಿ ಸೇನೆ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಘಟನೆಯಲ್ಲಿ ಪೊಲೀಸ್ ಒಬ್ಬರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.

ಅನಂತ್‍ನಾಗ್ ಜಿಲ್ಲೆಗಳ ಗಡಿ ಭಾಗಗಳಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿಯನ್ನಾಧರಿಸಿ ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುತ್ತಿದ್ದಾಗ ಉಗ್ರರು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಯೋಧರು ನಡೆಸಿದ ದಾಳಿಯಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ.

ಘಟನೆಯಲ್ಲಿ ಪೊಲೀಸ್ ಒಬ್ಬ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರೀತಿ ಬಂಡಿಪೋರಾ ಜಿಲ್ಲೆಯಲ್ಲಿ ನಡೆದ ಮತ್ತೊಂದು ಕಾರ್ಯಚರಣೆಯಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ.

ಶಹಾಗುಂದ್ ಪ್ರದೇಶದಲ್ಲಿ ನಾಗರೀಕರ ಮೇಲೆ ದಾಳಿ ಮಾಡಿದ್ದ ಆರೋಪ ಎದುರಿಸುತ್ತಿದ್ದ ಇಮ್ತಿಯಾಜ್ ಆಹಮದ್ ದಾರ್ ಎನ್‍ಕೌಂಟರ್‍ನಲ್ಲಿ ಬಲಿಯಾಗಿದ್ದಾನೆ ಎಂದು ಐಜಿಪಿ ವಿಜಯ್‍ಕುಮಾರ್ ಟ್ವಿಟ್ ಮಾಡಿದ್ದಾರೆ.

Facebook Comments