ಎನ್ಕೌಂಟರ್ : ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಬ್ಬರು ಉಗ್ರರು ಉಡೀಸ್
ಈ ಸುದ್ದಿಯನ್ನು ಶೇರ್ ಮಾಡಿ
ಶ್ರೀನಗರ,ಡಿ.25- ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರಗಾಮಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಉಗ್ರರ ಉಪಸ್ಥಿತಿ ಇರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಮೇರೆಗೆ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಶೋಪಿಯಾನ್ನ ಚೌಗಾಮ್ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದವು ಎಂದುಪೊಲೀಸ್ ಅಕಾರಿಯೊಬ್ಬರು ಹೇಳಿದ್ದಾರೆ.
ಭದ್ರತಾಪಡೆ ಸಿಬ್ಬಂದಿ ಮೇಲೆ ಉಗ್ರರು ಗುಂಡು ಹಾರಿಸಲಾರಂಭಿಸಿದಾಗ ಭದ್ರತಾ ಪಡೆಯವರೂ ಪ್ರತಿದಾಳಿ ನಡೆಸಿದರು. ಆಗ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಅಸುನೀಗಿದರು. ಅವರ ಗುರುತು ಮತ್ತು ಸಂಘಟನೆ ಪತ್ತೆಯಾಗಿಲ್ಲ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಈ ಅಕಾರಿ ವಿವರಿಸಿದ್ದಾರೆ.
Facebook Comments