ವಿಯೆಟ್ನಾಂ ಯುದ್ಧಕ್ಕಿಂತ ಹೆಚ್ಚು ಅಮೆರಿಕನ್ನರು ಕೊರೊನಾಗೆ ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ನ್ಯೂಯಾರ್ಕ್/ವಾಷಿಂಗ್ಟನ್, ಏ.29-ಕಿಲ್ಲರ್ ಕೊರೊನಾ ವೈರಸ್ ದಾಳಿಯಿಂದ ಅಮೆರಿಕದಲ್ಲಿ 59,000ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇದು ವಿಯೆಟ್ನಾಂ ಯುದ್ದದಲ್ಲಿ ಮೃತಪಟ್ಟ ಅಮೆರಿಕನ್ನರಿಗಿಂತ ಅಧಿಕ ಸಂಖ್ಯೆಯ ಮಂದಿಯನ್ನು ಅಗೋಚರ ವೈರಸ್ ಬಲಿ ಪಡೆದಿದೆ.

ವಿಯೆಟ್ನಾಂ ಯುದ್ದದಲ್ಲಿ ಸುಮಾರು 58,000 ಅಮೆರಿಕನ್ನರು ಸಾವಿಗೀಡಾಗಿದ್ದರು.
ಅಮೆರಿಕದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು, 12 ಲಕ್ಷಕ್ಕೂ ಅಧಿಕ ಮಂದಿ ಸಾಂಕ್ರಾಮಿಕ ರೋಗದಿಂದ ನರಳುತ್ತಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ನಾಳೆಯೊಳಗೆ 60,000ಕ್ಕೂ ಹೆಚ್ಚು ಅಮೆರಿಕನ್ನರು ಕೋವಿಡ್-19ಗೆ ಬಲಿಯಾಗಲಿದ್ದಾರೆ ಎಂದು ಅಂದಾಜು ಮಾಡಲಾಗಿದೆ. ಜಾನ್ಸ್ ಹಾಪ್‍ಕಿನ್ಸ್ ಯೂನಿವರ್ಸಿಟಿ ಮಾಹಿತಿ ಪ್ರಕಾರ ನಿನ್ನೆ ಒಂದೇ ದಿನ ಅಮೆರಿಕದಲ್ಲಿ 2,200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ವಿಶ್ವದಲ್ಲೇ ಕೋವಿಡ್-19 ವೈರಾಣು ದಾಳಿಗೆ ಅತಿಹೆಚ್ಚು ರೋಗಿಗಳು ಬಲಿಯಾದ ಮತ್ತು ಸೋಂಕು ಬಾಧಿತ ದೇಶ ಎಂಬ ಕುಖ್ಯಾತಿಗೆ ಅಮೆರಿಕ ಪಾತ್ರವಾಗಿದೆ. ಇಂದು ಮತ್ತೆ ಅಮೆರಿಕದ ವಿವಿಧ ರಾಜ್ಯಗಳು ಮತ್ತು ಪ್ರಮುಖ ನಗರಗಳಲ್ಲಿ ಕೊರೊನಾ ಸಾವು ಮತ್ತು ಸೋಂಕು ಪ್ರಕರಣಗಳ ಸರಣಿ ಯಥಾಪ್ರಕಾರ ಮುಂದುವರಿದಿದೆ.

ಅಮೆರಿಕದಲ್ಲಿ ಸುಮಾರು 93,000 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕಿಲ್ಲರ್ ವೈರಸ್ ಕೇಂದ್ರ ಬಿಂದು ಎನಿಸಿರುವ ನ್ಯೂಯಾರ್ಕ್ ನಗರವೊಂದರಲ್ಲೇ ಈವರೆಗೆ ಸುಮಾರು 22,000ಕ್ಕೂ ಹೆಚ್ಚು ಮಂದಿಯನ್ನು ಕೊರೊನಾ ವೈರಸ್ ಬಲಿಪಡೆದಿದೆ. ಇಲ್ಲಿ ಸೋಂಕಿತರ ಸಂಖ್ಯೆ 3.60 ಲಕ್ಷ ದಾಟಿದೆ.

ನಿನ್ನೆ ವಾಷಿಂಗ್ಟನ್‍ನ ಶ್ವೇತಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಯೆಟ್ನಾಂ ಯುದ್ಧದಲ್ಲಿ ಸುಮಾರು 58,000 ಅಮೆರಿಕನ್ನರು ಹತರಾಗಿದ್ದರು. ಆದರೆ ಕೇವಲ ಆರು ವಾರಗಳಲ್ಲೇ ಅಮೆರಿಕದಲ್ಲಿ ಅದಕ್ಕಿಂತಲೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದ್ದರು.

ಅಮೆರಿಕದಲ್ಲಿ 70,000ಕ್ಕೂ ಹೆಚ್ಚು ಜನರನ್ನು ಕೋವಿಡ್-19 ವೈರಸ್ ಬಲಿ ಪಡೆಯುವ ಸಾಧ್ಯತೆ ಬಗ್ಗೆ ಟ್ರಂಪ್ ಆತಂಕ ವ್ಯಕ್ತಪಡಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

Facebook Comments

Sri Raghav

Admin