‘ಪರಿಹಾರ ನೀಡಲು ಸಾದ್ಯವಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ’ : ಉಗ್ರಪ್ಪ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.4- ನೆರೆ ಹಾನಿಯ ಬಗ್ಗೆ ಕಳುಹಿಸಿದ್ದ 2ನೇ ವರದಿಯನ್ನೂ ಕೇಂದ್ರ ತಿರಸ್ಕರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕೆಪಿಸಿಸಿ, ಜನರಿಗೆ ಅನುಕೂಲ ಮಾಡಿಕೊಡುವ ಬದ್ಧತೆ ಇದ್ದರೆ ಮಾತ್ರ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿ ಮುಂದುವರೆಯಿರಿ ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ತೊಲಗಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ವಿ.ಎಸ್.ಉಗ್ರಪ್ಪ , ರಾಜ್ಯದ 23 ಜಿಲ್ಲೆಗಳಲ್ಲಿ ನೆರೆಯಿಂದ ಸಾಕಷ್ಟು ಹಾನಿಯಾಗಿದೆ. ಮೊದಲ ಹಂತದಲ್ಲಿ 38,500 ಕೋಟಿ ರೂ. ನಷ್ಟ ಸಂಭವಿಸಿರುವ ವರದಿ ತಯಾರಿಸಿ ಕೇಂದ್ರಕ್ಕೆ ಕಳುಹಿಸಲಾಗಿತ್ತು.

ಅದು ಸಮರ್ಪಕವಾಗಿಲ್ಲ ಎಂದು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು. 2ನೇ ಹಂತದಲ್ಲಿ 35,165 ಕೋಟಿ ನಷ್ಟದ ಅಂದಾಜು ತಯಾರಿಸಿ ಕಳುಹಿಸಲಾಗಿದೆ. ಅದನ್ನೂಕೂಡ ಕೇಂದ್ರ ತಿರಸ್ಕರಿಸಿದೆ. ಜನರ ಕಷ್ಟಗಳಿಗೆ ಸ್ಪಂದಿಸುವ ಬದ್ಧತೆ ಇಲ್ಲದಿದ್ದ ಮೇಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜೀನಾಮೆ ಕೊಟ್ಟು ಹೋಗಲಿ. ಅಧಿಕಾರಕ್ಕೆ ಅಂಟಿಕೊಂಡು ಜನರಿಗೆ ಸಮಸ್ಯೆ ಕೊಡುತ್ತಿದ್ದೀರಿ ಎಂದು ಕಿಡಿಕಾರಿದರು.

Facebook Comments