ದೇಶಾದ್ಯಂತ ಹೊಸದಾಗಿ 114 ಆಧಾರ್ ಸೇವಾ ಕೇಂದ್ರ ಸ್ಥಾಪನೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ನ.21-ಆಧಾರ್ ಕಾರ್ಡ್ ನೋಂದಣಿ ಮತ್ತು ಪರಿಷ್ಕರಣೆ ವೇಳೆ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ಯುಐಡಿಎಐ ಸಮರ್ಪಕವಾದ ಟೋಕನ್ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದ್ದು, ಜೊತೆಯಲ್ಲಿ ದೇಶಾದ್ಯಂತ 53 ನಗರಗಳಲ್ಲಿ 114 ಹೊಸ ಕೇಂದ್ರಗಳನ್ನು ಸ್ಥಾಪಿಸುವುದಾಗಿ ತಿಳಿಸಿದೆ.

ಈವರೆಗೂ ಬೆಂಗಳೂರಿನ ಸೌತ್ ಎಂಡ್ ಸರ್ಕಲ್‍ನಲ್ಲಿರುವ ಸೇವಾ ಕೇಂದ್ರ ಸೇರಿದಂತೆ ದೇಶಾದ್ಯಂತ 21 ಕೇಂದ್ರಗಳನ್ನು ಸ್ಥಾಪಿಸಿದೆ. ಇಲ್ಲಿ ಪ್ರತಿದಿನ ಒಂದು ಸಾವಿರ ಮಂದಿಯ ನೋಂದಣಿ ಮತ್ತು ಪರಿಷ್ಕರಣೆಗೆ ಅವಕಾಶವಿದೆ.

ಆದರೂ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ ಸಂಬಂಧಿಸಿದಂತೆ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 114 ಕೇಂದ್ರಗಳನ್ನು ಸ್ಥಾಪಿಸಲು ಪ್ರಾಧಿಕಾರ ನಿರ್ಧರಿಸಿದೆ. ಈಗಿರುವ ಕೇಂದ್ರಗಳು ವಾರ ಪೂರ್ತಿ ಬೆಳಿಗ್ಗೆ 9 ರಿಂದ ಸಂಜೆ 5.30ರವರೆಗೆ ನಿರಂತರವಾಗಿ ಕೆಲಸ ಮಾಡಲಿವೆ.

ಸಾರ್ವಜನಿಕರು appointments.uidai.gov.in/ bookappointmentmen… ಈ ಲಿಂಕ್ ಬಳಸಿ ಆನ್‍ಲೈನ್ ಅಪಾಯಿಂಟ್‍ಮೆಂಟ್ ಪಡೆದುಕೊಳ್ಳಬಹುದಾಗಿದೆ. ಪೂರ್ವ ಸಮಯ ನಿಗದಿ ಮಾಡಿಕೊಂಡವರು ಸರತಿ ಸಾಲಿನಲ್ಲಿ ನಿಲ್ಲಲು ಅವಕಾಶವಿಲ್ಲದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಆಧಾರ್ ಸೇವಾ ಕೇಂದ್ರದಲ್ಲಿ ಸಾಕಷ್ಟು ಕುರ್ಚಿಗಳನ್ನು ಹಾಕಲಾಗಿದ್ದು, ಹವಾನಿಯಂತ್ರಿತ ವ್ಯವಸ್ಥೆ ರೂಪಿಸಲಾಗಿದೆ.

ಸಾರ್ವಜನಿಕರಿಗೆ ಆಧಾರ್‍ನೋಂದಣಿ ಮತ್ತು ಪರಿಷ್ಕರಣೆಯಿಂದ ಯಾವುದೇ ತೊಂದರೆಯಾಗದಂತೆ ಎಚ್ಚರಿಕ ವಹಿಸುವುದಾಗಿ ಪ್ರಾಧಿಕಾರ ಪ್ರತಿಕಾ ಹೇಳಿಕೆಯಲ್ಲಿ ತಿಳಿಸಿದೆ.

Facebook Comments