ಕೋಮು ಗಲಭೆ ಸೃಷ್ಟಿ ಆರೋಪ : ಉಮರ್ ಖಲೀದ್ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಸೆ.14- ಕೋಮು ಗಲಭೆ ಸೃಷ್ಟಿ ಆರೋಪದ ಮೇಲೆ ಇಲ್ಲಿನ ಜವಾಹರ್‍ಲಾಲ್ ನೆಹರು ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಉಮರ್ ಖಲೀದ್‍ನನ್ನು ದೆಹಲಿ ಪೊಲೀಸರ ವಿಶೇಷ ತಂಡ ಬಂಧಿಸಿದೆ.  ಈಶಾನ್ಯ ದೆಹಲಿಯಲ್ಲಿ ಕಳೆದ ಡಿಸೆಂಬರ್‍ನಲ್ಲಿ ನಡೆದಿದ್ದ ಹಿಂಸಾಚಾರದಲ್ಲಿ ಈತ ಭಾಗಿಯಾಗಿದ್ದ ಮತ್ತು ಪ್ರಚೋದನೆ ನೀಡಿದ್ದ ಎಂದು ಆರೋಪಿಸಲಾಗಿತ್ತು.

ಪ್ರಸ್ತುತ ಈತನನ್ನು ವಿಚಾರಣೆಗೊಳಪಡಿಸಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಕೆಲ ವಿದ್ಯಾರ್ಥಿಗಳನ್ನು ಪ್ರಚೋದಿಸಿ ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಲು ಈತ ಸೂಚಿಸಿದ್ದ ಮತ್ತು ಕೆಲವು ಕಡೆ ಈತನೂ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Facebook Comments