ಕಾಂಗ್ರೆಸ್‍ನ ಹಲವಾರು ಶಾಸಕರು ಬಿಜೆಪಿಗೆ ಬರಲಿದ್ದಾರೆ: ಉಮೇಶ್ ಜಾಧವ್

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ,ಮೇ 20- ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗಲಿದ್ದು ಕಾಂಗ್ರೆಸ್‍ನ ಹಲವಾರು ಶಾಸಕರು ಬಿಜೆಪಿಗೆ ಬರಲಿದ್ದಾರೆ. ಮೇ 24ಕ್ಕೆ ಬಿಜೆಪಿ ಸರ್ಕಾರ ಬರುತ್ತದೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದು ಉಮೇಶ್ ಜಾಧವ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನೋತ್ತರ ಸಮೀಕ್ಷೆ ಮೊದಲೇ ಬಿಜೆಪಿಗೆ 23 ಸ್ಥಾನಗಳು ಬರುತ್ತವೆ ಎಂಬುದು ಗೊತ್ತಿತ್ತು. ಈಗ ಎಲ್ಲಾ ಸಮೀಕ್ಷೆಗಳಲ್ಲೂ ಅದೇ ವ್ಯಕ್ತವಾಗಿದೆ.

ಮೇ 23ರ ಫಲಿತಾಂಶದ ನಂತರ ಮೈತ್ರಿ ಸರ್ಕಾರ ಬೀಳುತ್ತದೆ. ಬಿಜೆಪಿ ಸರ್ಕಾರ ರಚನೆಯಾಗುತ್ತದೆ ಎಂದು ಹೇಳಿದರು. 48 ಗಂಟೆಯೊಳಗೆ ಜನರ ಫಲಿತಾಂಶ ಹೊರಬರಲಿದೆ. ದೇಶದೆಲ್ಲೆಡೆ ಬಿಜೆಪಿ ಪರವಾಗಿ ಸಮೀಕ್ಷೆ ಬಂದಿದೆ.

ಮತ್ತೊಮ್ಮೆ ಮೋದಿ ಪ್ರಧಾನಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ರಾಜ್ಯದಲ್ಲಿ ಅಂದುಕೊಂಡಂತೆ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ದೇಶದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ