ಪಕ್ಷ ಯಾವುದೇ ಕೆಲಸ ಸೂಚಿಸಿದರೂ ಮಾಡಲು ಸಿದ್ಧ : ಉಮೇಶ್ ಜಾಧವ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 27-ಪಕ್ಷ ಯಾವುದೇ ಕೆಲಸ ನಿರ್ವಹಿಸುವಂತೆ ಸೂಚಿಸಿದರೂ ಮಾಡಲು ಸಿದ್ಧವಿರುವುದಾಗಿ ಕಲಬುರಗಿ ಲೋಕಸಭೆ ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿ ಉಮೇಶ್ ಜಾಧವ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ನಿರ್ದೇಶನದಂತೆ ಕಾರ್ಯನಿರ್ವಹಿಸುವುದಾಗಿ ಹೇಳಿದರು.

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಹಾಗೂ ಆಪರೇಷನ್ ಕಮಲದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕಾಂಗ್ರೆಸ್‍ನ ಅತೃಪ್ತ ಶಾಸಕರು ಯಾರೂ ತಮ್ಮೊಂದಿಗೆ ಸಂಪರ್ಕದಲ್ಲಿಲ್ಲ. ಈ ಹಿಂದೆ ಕೂಡ ತಾವು ಸ್ವತಂತ್ರವಾಗಿ ಇದ್ದುದ್ದಾಗಿ ಸ್ಪಷ್ಟಪಡಿಸಿದರು.

ಲೋಕಸಭೆ ಚುನಾವಣೆಯಲ್ಲಿ ಗೆದ್ದ ಮೇಲೆ ದೆಹಲಿಗೆ ಹೋಗಿ ಬಂದಿದ್ದು, ರಾಜ್ಯದ ಬೆಳವಣಿಗೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಸೇರಿದಂತೆ ಎಲ್ಲಾ ಪಕ್ಷದ ನಾಯಕರು ತಮಗೆ ಶುಭಾಶಯ ಕೋರಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಲುಗಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ ಎಂದು ಹೇಳಿದರು.

ಇಂದು ಸಂಜೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ವಿಜೇತರಾಗಿರುವ ತಮ್ಮ ಪುತ್ರ ಅವಿನಾಶ್ ಜಾಧವ್ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Facebook Comments