ಸಚಿವನಾಗಲು ಒಂದು ವರ್ಷ ಕಾಯ್ದಿದ್ದೇನೆ : ಉಮೇಶ್ ಕತ್ತಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.14- ಸಚಿವನಾಗಲು ಒಂದು ವರ್ಷ ಕಾಯ್ದಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲ ಶಾಸಕರೂ ಮಂತ್ರಿಯಾಗಲಿದ್ದಾರೆ ಎಂದು ನೂತನ ಸಚಿವ ಉಮೇಶ್ ಕತ್ತಿ ತಿಳಿಸಿದರು. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪೂಜೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷ ಕಾದ ನಂತರ ಸಚಿವನಾಗಿದ್ದೇನೆ. 224 ಶಾಸಕರೂ ಮುಂದಿನ ದಿನಗಳಲ್ಲಿ ಮಂತ್ರಿಯಾಗಲಿದ್ದಾರೆ ಎಂದರು.

ಮಾಜಿ ಸಚಿವ ಎಚ್.ವಿಶ್ವನಾಥ್ ಹಾಗೂ ಶಾಸಕ ಮುನಿರತ್ನ ಅವರ ವಿಚಾರ ನ್ಯಾಯಾಲಯದಲ್ಲಿದ್ದು, ಅದು ಇತ್ಯರ್ಥವಾದ ನಂತರ ಅವರೂ ಸಚಿವರಾಗಲಿದ್ದಾರೆ ಎಂದು ಹೇಳಿದರು. ಬ್ಲಾಕ್‍ಮೇಲ್ ಮಾಡಿ ಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಮಕರ ಸಂಕ್ರಮಣ ದಿನದಂದು ಒಳ್ಳೆಯ ಯೋಚನೆ ಮಾಡಿ, ಒಳ್ಳೆಯ ಕೆಲಸ ಮಾಡಿ, ಎಲ್ಲರ ಕುಟುಂಬಕ್ಕೂ ಒಳ್ಳೆಯದಾಗಲಿ. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ನನ್ನ ಆತ್ಮೀಯರು ಎಂದಷ್ಟೇ ಹೇಳಿದರು.

ಇನ್ನು ತಮಗೆ ಯಾವುದೇ ಖಾತೆ ಹಂಚಿಕೆಯಾಗಿಲ್ಲ. ಖಾತೆ ಹಂಚಿಕೆಯಾದ ನಂತರ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಈ ಹಿಂದೆಯೂ ಹಲವು ಇಲಾಖೆಗಳ ಸಚಿವರಾಗಿ ಕೆಲಸ ಮಾಡಿದ ಅನುಭವವಿದೆ. ಯಾವುದೇ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ ಎಂದು ಹೇಳಿದರು.

Facebook Comments