ಮೂಲ ಸೌಕರ್ಯ ವಲಯದಲ್ಲಿ 100ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಗುರಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜು.12- ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಜಾಗತಿಕ, ಆರ್ಥಿಕ ಹಿನ್ನೆಡೆಗಳ ನಡುವೆಯೂ ವಿವಿಧ ವಲಯಗಳಲ್ಲೂ ಹೂಡಿಕೆ ಮತ್ತು ವಿದೇಶಿ ನೇರ ಬಂಡವಾಳ ಹೂಡಿಕೆಗೆ ನೀಡಿರುವ ಆದ್ಯತೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥಿಸಿಕೊಂಡಿದ್ದಾರೆ.

ಮುಂದಿನ 5ವರ್ಷಗಳಲ್ಲಿ ಮೂಲಸೌಕರ್ಯ ವಲಯದ ಅಭಿವೃದ್ಧಿ 100ಲಕ್ಷ ಕೋಟಿ ಬಂಡವಾಳ ಹೂಡಿಕೆ ಯೋಜನೆಯನ್ನು ರೂಪಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.ರಾಜ್ಯಸಭೆಯಲ್ಲಿಂದು ಕೇಂದ್ರ ಬಜೆಟ್ 2019-20ರ ಕುರಿತು ಸಾಮಾನ್ಯ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಬಜೆಟ್ ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಿದರು.

ಮುಂದಿನ 10 ವರ್ಷಗಳಲ್ಲಿ ಅಭಿವೃದ್ಧಿಗಾಗಿ ಸಮಗ್ರ ದೃಷ್ಟಿಕೋನದ ಯೋಜನೆಯನ್ನು ರೂಪಿಸಲಾಗಿದೆ. ಭಾರತವು 5ಲಕ್ಷ ಕೋಟಿ ಡಾಲರ್ ಆರ್ಥಿಕ ಗುರಿ ತಲುಪಲು ಸರ್ಕಾರ ಬದ್ಧವಾಗಿದ್ದು ಅದಕ್ಕೆ ಅಗತ್ಯವಾದ ಎಲ್ಲ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.

ಮುಂದಿನ 5ವರ್ಷಗಳಲ್ಲಿ ಮೂಲಸೌಕರ್ಯ ವಲಯದ ಅಭಿವೃದ್ಧಿ 100ಲಕ್ಷ ಕೋಟಿ ಬಂಡವಾಳ ಹೂಡಿಕೆ ಯೋಜನೆಯನ್ನು ರೂಪಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

Facebook Comments