ಬಿಗ್ ಬ್ರೇಕಿಂಗ್ : ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು.ಸೆ. 23 ; ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ (65 ) ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ 15 ದಿನಗಳ ಹಿಂದೆ ತಮಗೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ  ಸ್ವತಃ ಅವರೇ ಟ್ವೀಟ್ ಮಾಡಿದ್ದು ನಾನು ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು ಯಾರೂ ಕೂಡ ಆತಂಕ ಪಡಬೇಕಾಗಿಲ್ಲ ಶೀಘ್ರವಾಗಿ ಗುಣಮುಖರಾಗಿ ಬರುತ್ತೇನೆ ಎಂದು ತಿಳಿಸಿದ್ದರು.

ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ಸಿದ್ಧಾರೂಢ ರೈಲು ನಿಲ್ದಾಣ ನಾಮಕರಣ ಸಂಬಂಧಿದಂತೆ ಸಂತಸ ಹಂಚಿಕೊಂಡು ಮಾತನಾಡಿ ಹೇಳಿಕೆ ನೀಡಿದ್ದ ಸುರೇಶ್ ಅಂಗಡಿಯವರು ದೆಹಲಿಗೆ ಪ್ರಯಾಣಿಸುತ್ತಿದ್ದಂತೆ ಅವರಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ದೆಹಲಿಯ ಏಮ್ಸ್ ವೈದ್ಯರು ಈವರೆಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ, ಆದ್ರೆ ಕಳೆದ 2-3 ದಿನಂದನ್ನು ಅವ್ರ ಆರೋಗ್ಯದಲ್ಲಿ ಏರುಪೇರಾಗಿತ್ತು ಎನ್ನಲಾಗಿದೆ.

more updates awaiting ..

Facebook Comments

Sri Raghav

Admin