ಕೇಂದ್ರ ಸಚಿವ ಸುರೇಶ್ ಅಂಗಡಿಯವರಿಗೆ ಕರೋನಾ ಪಾಸಿಟಿವ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಸೆ. 11.ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರಿಗೆ ಕರೋನಾ ಸೋಂಕು ತಗುಲಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಬಗ್ಗೆ ಸ್ವತಃ ಕೇಂದ್ರ ಸಚಿವರೇ ಟ್ವೀಟ್ ಮಾಡಿದ್ದು ನಾನು ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು ಯಾರೂ ಕೂಡ ಆತಂಕ ಪಡಬೇಕಾಗಿಲ್ಲ ಶೀಘ್ರವಾಗಿ ಗುಣಮುಖರಾಗಿ ಬರುತ್ತೇನೆ ಎಂದು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ಸಿದ್ಧಾರೂಢ ರೈಲು ನಿಲ್ದಾಣ ನಾಮಕರಣ ಸಂಬಂಧಿದಂತೆ ಸಂತಸ ಹಂಚಿಕೊಂಡು ಮಾತನಾಡಿ ಹೇಳಿಕೆ ನೀಡಿದ್ದ ಸುರೇಶ್ ಅಂಗಡಿಯವರು ದೆಹಲಿಗೆ ಪ್ರಯಾಣಿಸುತ್ತಿದ್ದಂತೆ ಅವರಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆಗ ಜನಿಸಿದರು. ಸುರೇಶ್ ಅವರು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪಾ ಗ್ರಾಮದವರು. ಅವರು ಬೆಳಗಾವಿಯ ಎಸ್.ಎಸ್.ಎಸ್.ಸಮಿತಿ ಕಾಲೇಜ್ ಆಫ್ ಕಾಮರ್ಸ್ ನಿಂದ ಪದವಿಯನ್ನು ಪಡೆದರು.

ನಂತರ ಅವರು ಬೆಳಗಾವಿಯ ಪ್ರತಿಷ್ಠಿತ ರಾಜ ಲಖಮ್ ಗೌಡ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದರು. ಸಾರ್ವಜನಿಕ ಜೀವನಕ್ಕೆ ಪ್ರವೇಶಿಸುವ ಮೊದಲು ಅವರು ತಮ್ಮದೇ ಆದ ಖಾಸಗಿ ವ್ಯವಹಾರವನ್ನು ನಡೆಸುತ್ತಿದ್ದರು. ಸುರೇಶ್ ಅಂಗಡಿಯವರು ಮೇ 2009 ರಲ್ಲಿ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿಪ್ರಮಾಣವಚನ ಸ್ವೀಕರಿಸಿದ್ದರು.

Facebook Comments

Sri Raghav

Admin