ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ಥಿತಿ ಗಂಭೀರ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಡಿ.6-ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ರಾಯ್‍ಬರೇಲಿ ನ್ಯಾಯಾಲಯಕ್ಕೆ ಬರುತ್ತಿದ್ದ ವೇಳೆ ಐವರು ದುಷ್ಕರ್ಮಿಗಳು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಪ್ರಕರಣದ ಬಗ್ಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ನಡುವೆಯೇ ಆಕೆಯ ಸ್ಥಿತಿ ಮತ್ತಷ್ಟು ವಿಷಮವಾಗಿದೆ.

ಲಕ್ನೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆಯನ್ನು ಹೆಲಿಕಾಪ್ಟರ್ ಮೂಲಕ ಇಂದು ಬೆಳಗ್ಗೆ ದೆಹಲಿಯ ಸಫ್ತರ್‍ಜಂಗ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಆಕೆಯ ಸ್ಥಿತಿ ತುಂಬಾ ಶೋಚನೀಯವಾಗಿದೆ. ಆಕೆಯ ಪ್ರಮುಖ ಅಂಗಗಳ ಕಾರ್ಯ ಕ್ಷೀಣಿಸುತ್ತಿದೆ ಎಂದು ಆಸ್ಪತ್ರೆಯ ಸುಟ್ಟಗಾಯ ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ಶಲಬ್‍ಕುಮಾರ್ ತಿಳಿಸಿದ್ದಾರೆ.

ಆಕೆಯನ್ನು ನಿಗಾ ಘಟಕದಲ್ಲಿ ಇರಿಸಿ ನಿಗಾ ವಹಿಸಲಾಗಿದೆ. ಇನ್ನೂ ಕೆಲ ಗಂಟೆಗಳ ಕಾಲ ಸಂತ್ರಸ್ತೆ ಸ್ಥಿತಿ ಬಗ್ಗೆ ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏರ್‍ರ್ಪೊರ್ಟ್‍ನಿಂದ ಸಫ್ತರ್‍ಜಂಗ್ ಆಸ್ಪತ್ರೆಗೆ ಆ್ಯಂಬುಲೆನ್ಸ್‍ನಲ್ಲಿ ಕರೆತರುವ ಮಾರ್ಗದಲ್ಲಿ ಶೂನ್ಯ ವಾಹನ ವ್ಯವಸ್ಥೆ (ಗ್ರೀನ್ ಕಾರಿಡಾರ್) ಮಾಡಲಾಗಿತ್ತು.

Facebook Comments