8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಕುಖ್ಯಾತ ಕ್ರಿಮಿನಲ್ ವಿಕಾಸ್ ದುಬೆ ಕೊನೆಗೂ ಅರೆಸ್ಟ್ ..!

ಈ ಸುದ್ದಿಯನ್ನು ಶೇರ್ ಮಾಡಿ

ಕಾನ್ಪುರ ಜು.09 : 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಕುಖ್ಯಾತ ಕ್ರಿಮಿನಲ್ ವಿಕಾಸ್ ದುಬೆಯನ್ನು ಉಜ್ಜಯಿನಿಯಲ್ಲಿ ಕೊನೆಗೂ ಬಂಧಿಸಲಾಗಿದೆ. ಉತ್ತರ ಪ್ರದೇಶ ಪೊಲೀಸರು ತನ್ನನ್ನು ಎನ್ ಕೌಂಟರ್ ಮಾಡಬಹುದು ಎಂಬ ಭಯದಿಂದ ವಿಕಾಸ್ ದುಬೆ ಮಧ್ಯಪ್ರದೇಶಕ್ಕೆ ಬಂದಿದ್ದ ಎನ್ನಲಾಗಿದೆ. ಉಜ್ಜಯನಿಗೆ ಬಂದ ನಂತರ ಪೊಲೀಸರಿಗೆ ತನ್ನ ಇರುವಿಕೆಯ ಮಾಹಿತಿ ನೀಡಿದ್ದ, ಪೊಲೀಸರು ಬರುತ್ತಿದ್ದಂತೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ. ಸದ್ಯ ಮಧ್ಯಪ್ರದೇಶ ಪೊಲೀಸರು ದುಬೆಯನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ ನಂತರ ಆತನನ್ನು ಉತ್ತರ ಪ್ರದೇಶ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎನ್ನಲಾಗಿದೆ.

ಘಟನೆ ನಡೆದ 6 ದಿನಗಳ ನಂತರ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದುಬೆ ಸಹಚರ ಅಮರ್ ದುಬೆಯನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದರು.

ಪ್ರಮುಖ ಆರೋಪಿ ವಿಕಾಸ್ ದುಬೆ ಹರಿಯಾಣದ ಹೋಟೆಲ್ ನಲ್ಲಿ ಕಾಣಿಸಿಕೊಂಡಿದ್ದು ಪೊಲೀಸರಿಂದ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದ. ಈ ನಡುವೆ ಆತ ಗ್ರೇಟರ್ ನೋಯ್ಡಾದಲ್ಲಿ ಕೋರ್ಟ್ ಗೆ ಶರಣಾಗಲಿದ್ದಾನೆ ಎಂದು ಹೇಳಲಾಗಿತ್ತು. ಆದರೆ, ಸಿನಿಮೀಯ ಶೈಲಿಯ ಕಾರ್ಯಾಚರಣೆ ನಡೆಸಿದ ಪೊಲೀಸರು ಉಜ್ಜಯಿನಿಯಲ್ಲಿ ವಿಕಾಸ್ ದುಬೆಯನ್ನು ಅರೆಸ್ಟ್ ಮಾಡಿದ್ದಾರೆ ಎಂದು ಹೇಳಲಾಗಿದೆ.

ಉತ್ತರಪ್ರದೇಶ ರಾಜ್ಯದಲ್ಲಿ 60 ಅಪರಾಧ ಕೇಸುಗಳಿದ್ದ ವಿಕಾಸ್ ದುಬೆ ಎಂಬ ಪಾತಕಿಯನ್ನು ಬಂಧಿಸಲು ಪೊಲೀಸರು ದಿಕ್ರು ಎಂಬ ಗ್ರಾಮಕ್ಕೆ ಕಳೆದ ಶುಕ್ರವಾರ ನಸುಕಿನ ಜಾವ ತೆರಳಿದಾಗ ಮೊದಲ ಎನ್’ಕೌಂಟರ್ ನಡೆದಿತ್ತು. ಪೊಲೀಸರು ಬರುವ ಸುಳಿವು ಅರಿತಿದ್ದ ವಿಕಾಸ್ ದುಬೆ ಸಹಚರರು, ರಸ್ತೆಗೆ ಅಡ್ಡಲಾಗಿ ಕಲ್ಲು-ಕಟ್ಟಿಗೆಗಳನ್ನು ಇಟ್ಟಿದ್ದರು.

ಪೊಲೀಸರು ಇವನ್ನು ತೆರವುಗೊಳಿಸಿ ದುಬೆ ಅವಿತಿದ್ದ ಮನೆಯತ್ತ ಆಗಮಿಸಲು ಅಣಿಯಾಗುತ್ತಿದ್ದಂತೆಯೇ ಆತನ ಮನೆಯ ಮೇಲಿಂದ ಕ್ರಿಮಿನಲ್’ಗಳು ಗುಂಡಿನ ಮಳೆಗೆರೆದಿದ್ದಾರೆ. ಆಗ ಗುಂಡೇಟು ತಿಂದ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳು ಹಾಗೂ 4 ಪೇದೆಗಳು ಅಸುನೀಗಿದ್ದರು.

# ವಿಕಾಸ್ ದುಬೆ ಹಿಸ್ಟರಿ :
2000ದಲ್ಲಿ ನಡೆದ ಥಾರಾಚಂದ್ ಕಾಲೇಜು ಪ್ರಿನ್ಸಿಪಾಲ್ ಮತ್ತು ಸಹಾಯಕ ಮ್ಯಾನೇಜರ್ ಹತ್ಯೆ ಪ್ರಕರಣದಲ್ಲಿಯೂ ಈತನ ಹೆಸರು ಕೇಳಿ ಬಂದಿತ್ತು. 2000ದಲ್ಲಿ ನಡೆದ ರಾಮ್ ಬಾಬು ಯಾದವ್ ಹತ್ಯೆ ಪ್ರಕರಣ, 2004ರಲ್ಲಿ ನಡೆದ ದಿನೇಶ್ ದುಬೆ ಹತ್ಯೆ ಪ್ರಕರಣದಲ್ಲಿಯೂ ವಿಕಾಸ್ ದುಬೆ ಹೆಸರು ಕೇಳಿ ಬಂದಿದೆ.

ಈ ಹತ್ಯೆಗಳು ನಡೆಯವಾಗ ಜೈಲಿನಲ್ಲಿದ್ದ ವಿಕಾಸ್ ದುಬೆ ಅಲ್ಲಿಂದಲೇ ಸಹಚರರ ಮೂಲಕ ಸಂಚು ರೂಪಿಸಿದ್ದ. ಆತನನನ್ನು ಹಿಡಿದುಕೊಟ್ಟವರಿಗೆ 5 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸರು ತಿಳಿಸಿದ್ದರು.

Facebook Comments

Sri Raghav

Admin