ಮೂರು ಜಿಲ್ಲೆ ಹೊರತು ಪಡಿಸಿ ಉಳಿದೆಡೆ ಲಾಕ್ ಡೌನ್ ಸಡಿಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಲಕ್ನೋ, ಜೂ.6- ಮಹಾರಾಷ್ಟ್ರ ರಾಜ್ಯದ ಬಳಿಕ ಈಗ ಉತ್ತರ ಪ್ರದೇಶ ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿದೆ. ಭಾನುವಾರ ಉತ್ತರ ಪ್ರದೇಶ ಸರ್ಕಾರ ಮೀರತ್, ಶಹರಣಾಪುರ್, ಗೋರಕ್ ಪುರ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದೆಡೆಯಲ್ಲೆಲ್ಲಾ ಲಾಕ್ ಡೌನ್ ಅನ್ನು ಸಡಿಲಗೊಳಿಸಿದೆ.

ರಾಜ್ಯದ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ನವನೀತ್ ಸೆಹಗಲ್ ಅವರು, ಮೂರು ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದೆಡೆಗಳಲ್ಲಿ ಲಾಕ್ ಡೌನ್ ತೆರವು ಮಾಡಲಾಗಿದೆ ಎಂದಿದ್ದಾರೆ. ಈ ಮೂರು ಜಿಲ್ಲೆಗಳಲ್ಲಿ 600ಕ್ಕೂ ಹೆಚ್ಚ ಸಕ್ರಿಯ ಪ್ರಕರಣಗಳಿವೆ. ಹಾಗಾಗಿ ಲಾಕ್ ಡೌನ್ ಮುಂದುವರೆಸಲಾಗಿದೆ ಎಂದಿದ್ದಾರೆ.

Facebook Comments