ಸಿಎಂ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡಿದ್ದ ಮಹಿಳೆ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಲಖ್ನೋ,ಜು.22- ತನ್ನ ಜಮೀನನ್ನು ಕಬಳಿಸಲು ಕೆಲವರು ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಇಲ್ಲಿನ ಮುಖ್ಯಮಂತ್ರಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

ಕಳೆದ ಜುಲೈ 15ರಂದು ತನ್ನ ಮಗಳೊಂದಿಗೆ ಬಂದು ಅಮೇಥಿ ಜಿಲ್ಲೆಯಲ್ಲಿ ವಾಸವಾಗಿರುವ ನಾನು ಸಣ್ಣ ಭೂಮಿ ಹೊಂದಿದ್ದು, ಅದನ್ನು ಕಿತ್ತುಕೊಳ್ಳಲು ಕೆಲವರು ಪ್ರಯತ್ನಿಸುತ್ತಿದ್ದಾರೆ.

ಪೊಲೀಸರು ಕೂಡ ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ 50 ವರ್ಷದ ಸಫಿಯಾ ಪ್ರಯತ್ನಿಸಿದ್ದರು.

ಪೊಲೀಸರ ಬಂದೋಬಸ್ತಿನಲ್ಲಿರುವ ಸಿಎಂ ಕಚೇರಿ ಬಳಿ ಈ ದುರ್ಘಟನೆ ನಡೆದ ನಂತರ ತನಿಖೆಗೆ ಆದೇಶಿಸಿ ಕಾಂಗ್ರೆಸ್ ಮುಖಂಡರು ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.

ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಮಹಿಳೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಆಕೆಯ ಮಗಳ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.

Facebook Comments

Sri Raghav

Admin