ಅಮೆರಿಕದಲ್ಲಿ 15.23 ಲಕ್ಷ ಆಕ್ಟಿವ್ ಕೊರೋನಾ ಕೇಸ್

ಈ ಸುದ್ದಿಯನ್ನು ಶೇರ್ ಮಾಡಿ

ವಾಷಿಂಗ್ಟನ್/ನ್ಯೂಯಾರ್ಕ್, ಜು.4- ಡೆಡ್ಲಿ ಕೊರೊನಾ ವೈರಸ್ ದಾಳಿಯಿಂದ ತತ್ತರಿಸಿರುವ ಅಮೆರಿಕದಲ್ಲಿ ಮೃತರ ಸಂಖ್ಯೆ 1.32 ಲಕ್ಷ ಹಾಗೂ ರೋಗ ಪೀಡಿತರ ಸಂಖ್ಯೆ 28.90 ಲಕ್ಷ ದಾಟಿದೆ. ಅಲ್ಲದೇ ಇನ್ನೂ 15.23 ಲಕ್ಷ ಸಕ್ರಿಯ ಪ್ರಕರಣಗಳಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ನಿನ್ನೆ ಮಧ್ಯರಾತ್ರಿವರೆಗೆ ಲಭಿಸಿದ ಮಾಹಿತಿ ಪ್ರಕಾರ ಅಮೆರಿಕದಲ್ಲಿ ಈವರೆಗೆ 1,32,101 ಮಂದಿ ಮೃತಪಟ್ಟಿದ್ದು, 28,90,588 ಮಂದಿ ಸಾಂಕ್ರಾಮಿಕ ರೋಗ ಪೀಡಿತರಾಗಿದ್ದಾರೆ. ಇವರಲ್ಲಿ ಸುಮಾರು 16,000 ರೋಗಿಗಳ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಮುಂದುವರಿದಿದೆ.

ಅಮೆರಿಕದಲ್ಲಿ ಈವರೆಗೆ ಸುಮಾರು 12,35,488 ಕೊರೊನಾ ಸೋಂಕು ರೋಗಿಗಳು ಚೇತರಿಸಿಕೊಂಡಿದ್ದಾರೆ/ ಗುಣಮುಖರಾಗಿದ್ದಾರೆ.ಅಮೆರಿಕದಲ್ಲಿ ಈಗಲೂ 15,22,999 ಸಕ್ರಿಯ ಪ್ರಕರಣಗಳು ದಾಖಲಾಗಿರುವುದು ಆತಂಕಕಾರಿಯಾಗಿದೆ.

ಜಗತ್ತಿನ ಮಹಾ ಶಕ್ತಿಶಾಲಿ ದೇಶ ಅಮೆರಿಕ ಕೊರೊನಾ ಸೋಂಕು ಮತ್ತು ಸಾವಿನಲ್ಲಿ ಮೊದಲ ಸ್ಥಾನದಲ್ಲಿದ್ದು, ಬ್ರೆಜಿಲ್ ಎರಡನೇ ಸ್ಥಾನದಲ್ಲಿದೆ. ಆ ರಾಷ್ಟ್ರದಲ್ಲಿ ಸುಮಾರು 15.43 ಲಕ್ಷ ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 63,254ಕ್ಕೇರಿದೆ. ನಂತರದ ಸ್ಥಾನಗಳಲ್ಲಿ ರಷ್ಯಾ, ಭಾರತ ಮತ್ತು ಬ್ರಿಟನ್ ದೇಶಗಳಿವೆ.

Facebook Comments