ಅಮೆರಿಕಾದಲ್ಲಿ ಕೊರೋನಾ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ..!

ಈ ಸುದ್ದಿಯನ್ನು ಶೇರ್ ಮಾಡಿ

ನ್ಯೂಯಾರ್ಕ್/ವಾಷಿಂಗ್ಟನ್, ಮೇ 29-ಕಿಲ್ಲರ್ ಕೋವಿಡ್-19 ವೈರಸ್ ದಾಳಿಯಿಂದ ಹೈರಾಣಾಗುತ್ತಿರುವ ಅಮೆರಿಕದಲ್ಲಿ ಮೃತರ ಸಂಖ್ಯೆ 1.03 ಲಕ್ಷಕ್ಕೇರಿದ್ದು, ರೋಗ ಪೀಡಿತರ ಸಂಖ್ಯೆ 17.68 ಲಕ್ಷ ಮುಟ್ಟಿದೆ.

ಈ ಮಧ್ಯೆ, ವಿಶ್ವದ ಸೂಪರ್‍ಪವರ್ ದೇಶ ಸೋಂಕು ಮತ್ತು ಸಾವು ಪ್ರಮಾಣದಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿದಿದೆ. ನಿನ್ನೆ ಮಧ್ಯರಾತ್ರಿವರೆಗೆ ಲಭಿಸಿದ ಮಾಹಿತಿ ಪ್ರಕಾರ ಅಮೆರಿಕದಲ್ಲಿ ಈವರೆಗೆ 1,03,330 ಮಂದಿ ಮೃತಪಟ್ಟಿದ್ದು, ಅಲ್ಲದೇ 17,68,461 ಮಂದಿ ಸಾಂಕ್ರಾಮಿಕ ರೋಗ ಪೀಡಿತರಾಗಿದ್ಧಾರೆ.

ಇವರಲ್ಲಿ 17,202ಕ್ಕೂ ಹೆಚ್ಚು ರೋಗಿಗಳ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಅಮೆರಿಕದಲ್ಲಿ ಪ್ರತಿದಿನ ಸರಾಸರಿ 1.500ಕ್ಕೂ ಹೆಚ್ಚು ಮಂದಿ ಸಾವಿಗೀಡಾಗುತ್ತಿದ್ದು, ಸೋಂಕಿನ ಪ್ರಮಾಣದಲ್ಲಿ ತೀವ್ರ ಏರಿಕೆ ಕಂಡು ಬಂದಿದೆ.

ಅಮೆರಿಕದಲ್ಲಿ ಈವರೆಗೆ 4.98 ಮಂದಿ ಚೇತರಿಸಿಕೊಂಡಿದ್ದು, ಗುಣಮುಖರಾಗಿದ್ದಾರೆ. ಜಗತ್ತಿನ ಮಹಾ ಶಕ್ತಿಶಾಲಿ ದೇಶ ಅಮೆರಿಕ ಕೊರೊನಾ ಸೋಂಕು ಮತ್ತು ಸಾವಿನಲ್ಲಿ ಮೊದಲ ಸ್ಥಾನದಲ್ಲಿದ್ದು, ಬ್ರೆಜಿಲ್ ಎರಡನೇ ಸ್ಥಾನದಲ್ಲಿದೆ.

ಸಾಂಬಾ ರಾಷ್ಟ್ರದಲ್ಲಿ ಸುಮಾರು 4.38 ಲಕ್ಷ ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 26,764ಕ್ಕೇರಿದೆ. ನಂತರದ ಸ್ಥಾನಗಳಲ್ಲಿ ರಷ್ಯಾ, ಸ್ಪೇನ್ ಮತ್ತು ಬ್ರಿಟನ್ ದೇಶಗಳಿವೆ.

Facebook Comments