ರಾಯಭಾರಿ ಕಚೇರಿಗೆ ಕಾರು ನುಗ್ಗಿ ಪೊಲೀಸ್ ಅಧಿಕಾರಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜು.4- ಯುನೈಟೆಡ್ ಸ್ಟೇಟ್ ರಾಯಭಾರಿ ಕಚೇರಿಗೆ ಕಾರು ನುಗ್ಗಿದ ಪರಿಣಾಮ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಯುಎಸ್ ರಾಯಭಾರ ಕಚೇರಿಯ ಗೇಟ್ ಬಳಿ ಕರ್ತವ್ಯದಲ್ಲಿದ್ದ ಪಿಸಿಆರ್ ಘಟಕದ ಸಹಾಯಕ ಸಬ್ ಇನ್ಸ್‍ಪೆಕ್ಟರ್ ಆಗಿದ್ದ ಲಾಲ್ ಮನ್ ಸಿಂಗ್ ಸಿಸೋಡಿಯಾ ಮೃತಪಟ್ಟಿದ್ದಾರೆ ಎಂದು ದೆಹಲಿ ಹೆಚ್ಚುವರಿ ಪೊಲೀಸ್ ಆಯುಕ್ತ ದೀಪಕ್ ಯಾದವ್ ಹೇಳಿದ್ದಾರೆ.

ಕಾರು ಚಾಲಿಸುತ್ತಿದ್ದ ಸಿದ್ದಾರ್ಥ್(41) ಜೈಪುರದ ರಾಜಸ್ಥಾನ್ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ ಎಂದು ತಿಳಿದುಬಂದಿದೆ.  ಚಾಣಕ್ಯಪುರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Facebook Comments