ಅಮೆರಿಕದಲ್ಲಿ 48.13 ಲಕ್ಷ ಸೋಂಕಿತರು, 1.58 ಲಕ್ಷ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ವಾಷಿಂಗ್ಟನ್/ನ್ಯೂಯಾರ್ಕ್, ಆ.3- ಮಾರಕ ಕೊರೊನಾ ವೈರಸ್ ದಾಳಿಯಿಂದ ತತ್ತರಿಸಿರುವ ಅಮೆರಿಕದಲ್ಲಿ ಮೃತರ ಸಂಖ್ಯೆ 1.58 ಲಕ್ಷ ಹಾಗೂ ರೋಗಪೀಡಿತರ ಸಂಖ್ಯೆ 48.13 ಲಕ್ಷ ದಾಟಿದೆ. ಅಲ್ಲದೇ ವಿಶ್ವದ ಸೂಪರ್ ಪವರ್ ರಾಷ್ಟ್ರದಲ್ಲಿ ಈಗಲೂ 22.76 ಲಕ್ಷ ಸಕ್ರಿಯ ಪ್ರಕರಣಗಳು ದಾಖಲಾಗಿರುವುದು ಆತಂಕದ ಸಂಗತಿ.

ನಿನ್ನೆ ಮಧ್ಯರಾತ್ರಿವರೆಗೆ ಲಭಿಸಿದ ಮಾಹಿತಿ ಪ್ರಕಾರ ಅಮೆರಿಕದಲ್ಲಿ ಈವರೆಗೆ 1,58,465 ಮಂದಿ ಮೃತಪಟ್ಟಿದ್ದು, 48,13,648 ಮಂದಿ ಸಾಂಕ್ರಾಮಿಕ ರೋಗ ಪೀಡಿತರಾಗಿದ್ದಾರೆ.

ಇವರಲ್ಲಿ ಸುಮಾರು 18,620ಕ್ಕೂ ಹೆಚ್ಚು ರೋಗಿಗಳ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಮುಂದುವರಿದಿದೆ.

ಅಮೆರಿಕದಲ್ಲಿ ಈವರೆಗೆ ಸುಮಾರು 23,80,218 ಕೊರೊನಾ ಸೋಂಕು ರೋಗಿಗಳು ಚೇತರಿಸಿಕೊಂಡಿದ್ದಾರೆ/ ಗುಣಮುಖರಾಗಿದ್ದಾರೆ.
ಅಮೆರಿಕದಲ್ಲಿ ಈಗಲೂ 22,76,665 ಸಕ್ರಿಯ ಪ್ರಕರಣಗಳು ದಾಖಲಾಗಿರುವುದು ಆತಂಕಕಾರಿಯಾಗಿದೆ.

ಅಮೆರಿಕ ಕೊರೊನಾ ಸೋಂಕು ಮತ್ತು ಸಾವಿನಲ್ಲಿ ಮೊದಲ ಸ್ಥಾನದಲ್ಲಿದ್ದು, ಬ್ರೆಜಿಲ್ ಎರಡನೇ ಸ್ಥಾನದಲ್ಲಿದೆ. ಆ ರಾಷ್ಟ್ರದಲ್ಲಿ ಸೋಂಕು ಮತ್ತು ಸಾವುಗಳು ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ.

ಸಾಂಬಾ ನಾಡಿನಲ್ಲಿ 27.33 ಲಕ್ಷ ಮಂದಿಗೆ ಸೋಂಕು ತಗುಲಿದ್ದು, ಮೃತರ ಸಂಖ್ಯೆ 94,130ಕ್ಕ್ಕೇರಿದೆ. ನಂತರದ ಸ್ಥಾನಗಳಲ್ಲಿ ಭಾರತ, ರಷ್ಯಾ, ಮತ್ತು ದಕ್ಷಿಣ ಆಫ್ರಿಕಾ ದೇಶಗಳಿವೆ.

Facebook Comments

Sri Raghav

Admin