2+2 ಸಭೆ : ಅಮೆರಿಕ-ಭಾರತ ಬಲವರ್ಧನೆಗೆ ಮತ್ತಷ್ಟು ಪುಷ್ಟಿ

ಈ ಸುದ್ದಿಯನ್ನು ಶೇರ್ ಮಾಡಿ

ವಾಷಿಂಗ್ಟನ್, ಡಿ.19- ಭಾರತ ಮತ್ತು ಅಮೆರಿಕ ನಡುವೆ ಸಂಬಂಧ ಬಲವರ್ಧನೆಗೆ ಮತ್ತಷ್ಟು ಪುಷ್ಟಿ ನೀಡಿರುವ 2+2 ಸಭೆಯ ಮೊದಲನೆ ಸುತ್ತಿನ ಮಾತುಕತೆ ಫಲಪ್ರದವಾಗಿದೆ.
2+2 ಎರಡನೇ ಸುತ್ತಿನ ಮಾತುಕತೆ ಮುಂದುವರೆದಿದ್ದು , ಈ ಸಭೆಯಲ್ಲಿ ಎರಡೂ ದೇಶಗಳು ದ್ವಿಪಕ್ಷೀಯ, ಸ್ಥಳೀಯ ಮತ್ತು ಜಾಗತಿಕ ವಿಷಯಗಳ ಕುರಿತು ವಿಸ್ತೃತ ಮಾತುಕತೆಯಾಗಿದ್ದು , ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅಮೆರಿಕಾದ ಫಾಗ್ಗಿ ಬಾಟಮ್ ನಲ್ಲಿ ನಡೆಯುತ್ತಿರುವ ಮಾತುಕತೆಯಲ್ಲಿ ಭಾಗವಹಿಸಿದ್ದು ಅಮೆರಿಕದ ರಕ್ಷಣಾ ಇಲಾಖೆ ಕಾರ್ಯದರ್ಶಿ ಮಾರ್ಕ್ ಎಸ್ಟರ್ ಮತ್ತು ವಿದೇಶಾಂಗ ಸಚಿವ ಮೈಕ್ ಪೊಂಪಿಯೊ ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಎರಡೂ ದೇಶಗಳ ನಾಲ್ವರು ನಾಯಕರು ತಮ್ಮ ತಮ್ಮ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗವಹಿಸಿದ್ದಾರೆ. ಎರಡೂ ದೇಶಗಳ ಪ್ರಧಾನಿ ಮತ್ತು ಅಧ್ಯಕ್ಷರು ಈ ವರ್ಷ ತೆಗೆದುಕೊಂಡ ತೀರ್ಮಾನಗಳು ಮತ್ತು ಮುಂದಿನ ವರ್ಷ ತೆಗೆದುಕೊಳ್ಳಲಿರುವ ನಿರ್ಧಾರಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಿದ್ದಾರೆ. ಭಾರತ ಮತ್ತು ಅಮೆರಿಕ ಮಧ್ಯೆ ಮೊದಲ 2+2 ಮಾತುಕತೆ ಕಳೆದ ವರ್ಷ ಸೆಪ್ಟೆಂಬರ್‍ನಲ್ಲಿ ದೆಹಲಿಯಲ್ಲಿ ನಡೆದಿತ್ತು. ಇದು ಎರಡನೇ ಸುತ್ತಿನ ಮಾತುಕತೆಯಾಗಿದೆ.

ರಕ್ಷಣಾ ಸಹಕಾರ , ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಪೂರೈಕೆ, ಉಭಯ ದೇಶಗಳ ನಡುವೆ ಈಗಾಗಲೇ ಚಾಲನೆಯಲ್ಲಿರುವ ದ್ವಿಪಕ್ಷೀಯ ಬಾಂಧವ್ಯಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ 2+2 ಸಭೆ ಉಭಯ ದೇಶಗಳಿಗೂ ಅತ್ಯಂತ ಮಹತ್ವದ್ದಾಗಿದೆ.

Facebook Comments