ಸಿಎಂ ಹೆಚ್ಚುವರಿ ಕಾರ್ಯದರ್ಶಿ ವಿ.ಪಿ.ಇಕ್ಕೇರಿ ಎತ್ತಂಗಡಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.3- ಶಾಸಕರ ಕೆಂಗಣ್ಣಿಗೆ ಗುರಿಯಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಚ್ಚುವರಿ ಕಾರ್ಯದರ್ಶಿ ವಿ.ಪಿ.ಇಕ್ಕೇರಿ ಅವರನ್ನು ಎತ್ತಂಗಡಿ ಮಾಡಲಾಗಿದೆ. ಬಿಎಂಆರ್‍ಡಿ ಆಯುಕ್ತರನ್ನಾಗಿ ಅವರನ್ನು ನೇಮಕ ಮಾಡಲಾಗಿದೆ. ಸಿಎಂ ಅವರ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಇವರ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿದೆ.

ಆಡಳಿತಾರೂಡ ಬಿಜೆಪಿ ಶಾಸಕರೇ ಇವರನ್ನು ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕಿದ್ದರು. ಕಡತಗಳ ವಿಲೇವಾರಿ, ಕಾಮಗಾರಿಗಳ ಅನುಮೋದನೆ, ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಪ್ರಮುಖ ವಿಷಯಗಳಡಿ ಇಕ್ಕೇರಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪವಿತ್ತು.

ಇತ್ತೀಚೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಕ್ಕೇರಿ ಕಾರ್ಯವೈಖರಿ ವಿರುದ್ಧ ಇಬ್ಬರು ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ವಾಚಾಮಗೋಚರವಾಗಿ ಟೀಕೆ ಮಾಡಿದ್ದರು ಎಂದು ತಿಳಿದು ಬಂದಿತ್ತು.

ಸಿಎಂ ಕಚೇರಿಯ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದರ ಹಿನ್ನೆಲೆಯಲ್ಲಿ ಮೊದಲ ಹಂತವಾಗಿ ಇಕ್ಕೇರಿ ಅವರನ್ನು ವರ್ಗಾವಣೆ ಮಾಡಿದ್ದು, ಮುಂದಿನ ದಿನಗಳಲ್ಲಿ ಮತಷ್ಟು ಅಧಿಕಾರಿಗಳ ವರ್ಗಾವಣೆಯಾಗುವ ಸಾಧ್ಯತೆ ಇದೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.

Facebook Comments

Sri Raghav

Admin