“ಸರ್ಕಾರ ಬೀಳುತ್ತೆ ಅಂತ ಹೇಳ್ತಿರೋ ಕುಮಾರಸ್ವಾಮಿಗೆ ದೇವರು ಒಳ್ಳೇದು ಮಾಡ್ಲಿ”

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಸೆ.21- ಸರ್ಕಾರ ಬೀಳಲಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ವ್ಯಂಗ್ಯತೆಯ ಚಾಟಿ ಬೀಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ಕ್ಷೇತ್ರಗಳಲ್ಲಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದಕ್ಕಾಗಿ ಪೂರ್ವಭಾವಿ ಸಿದ್ಧತೆ ನಡೆಯುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಾತನಾಡುವುದಕ್ಕಿಂತ ಎಲ್ಲೆಡೆ ಸುತ್ತಾಡಲಿ. ನಮ್ಮ ಸರ್ಕಾರ ಬಂದು ಒಂದು ತಿಂಗಳಾಗಿದೆ. ಚಾಮುಂಡೇಶ್ವರಿ ದೇವಿ ಆಶೀರ್ವಾದ ಇರುವವರೆಗೂ ನಾವು ಅಧಿಕಾರದಲ್ಲಿರುತ್ತೇವೆ ಎಂದು ಟಾಂಗ್ ನೀಡಿದರು.

ಕಳೆದ 14 ತಿಂಗಳ ಹಿಂದೆ ಅವರೇ ಅಧಿಕಾರ ದಲ್ಲಿದ್ದರು. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಅವರು ಏನೇ ಹೇಳಲಿ ಜನರ ಭಾವನೆ ಬೇರೆಯೇ ಇದೆ ಎಂದು ಮಾರ್ಮಿಕವಾಗಿ ನುಡಿದರು.

Facebook Comments