ಸಂಕಷ್ಟದಲ್ಲೂ ಭ್ರಷ್ಠಚಾರದಲ್ಲಿ ತೊಡುಗುವಷ್ಷು ಭ್ರಷ್ಟರು ನಮ್ಮಲ್ಲಿ ಯಾರು ಇಲ್ಲ : ಸಿದ್ದುಗೆ ಸೋಮಣ್ಣ ತಿರುಗೇಟು

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಜು.14- ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಬಿಜೆಪಿ ಸರಕಾರ ಭ್ರಷ್ಠಚಾರದಲ್ಲಿ ತೊಡುಗುವಷ್ಷು ಭ್ರಷ್ಟರು ನಮ್ಮಲ್ಲಿ ಯಾರು ಇಲ್ಲಾ ಅದು ಇದ್ದರೆ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಎಂದು ವಸತಿ ಸಚಿವ ವಿ.ಸೋಮಣ್ಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಇಂದು ಬೆಳಗ್ಗೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ್ ಸ್ವಾಮೀಜಿಗಳ ಗದ್ದುಗೆಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು. ಸುಮಾರು 20 ನಿಮಿಷ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಶ್ರೀಗಳ ಜೊತೆ ಚರ್ಚೆ ನಡೆಸಿದ ಸಚಿವರು ಬಳಿಕ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಂಗಳೂರಿನಲ್ಲಿ ನಾಲ್ಕು ವಿಭಾಗಗಳನ್ನಾಗಿ ಮಾಡಿ ಕೋರೋನಾ ವೈರಸ್ ತಡೆಗಟ್ಟಲು ಮುಖ್ಯಮಂತ್ರಿ ಯಡಿಯೂರಪ್ಪ ಜವಾಬ್ದಾರಿ ಹಂಚಿದ್ದಾರೆ. ಸೋಂಕನ್ನು ಸಮರ್ಪಕವಾಗಿ ತಡೆಗಟ್ಟಲು ಕೆಲಸ ಮಾಡ ಬೇಕಾಗಿದೆ. ಅದಕ್ಕೆ ಸ್ವಾಮೀಜಿಗಳ ಆಶಿರ್ವಾದ ಪಡೆಯಲು ಬಂದಿದ್ದೇನೆ ಎಂದು ಹೇಳಿದರು.

ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳಾದ ಶಿವಾಜಿ ನಗರ, ಸುಭಾಷ್ ನಗರ, ಸಿ.ವಿ.ರಾಮನ್ ನಗರ, ಹೆಬ್ಬಾಳ, ಗೋವಿಂದರಾಜುನಗರ ಸೇರಿದಂತೆ ಐವತ್ತು ಮೂರು ವಾರ್ಡಗಳ ಜವಾಬ್ದಾರಿ ನೀಡಲಾಗಿದೆ ಅದನ್ನು ಯಶಸ್ವಿಯಾಗಿ ನಿಭಾಯಿಸುತ್ತೇನೆ ಎಂಬ ವಿಶ್ವಾಸ ಇದೆ ಎಂದರು.

ಬೆಂಗಳೂರಿನಲ್ಲಿ 1ಕೋಟಿ 35 ಲಕ್ಷ ಜನರು ವಾಸ ಮಾಡುತ್ತಿದ್ದಾರೆ, ಅವರೆಲ್ಲರ ಜೀವ ಮುಖ್ಯ. ಮಹಾಮಾರಿ ಕೊರೋನಾಗೆ ಹೆದರಿ ಕೆಲವರು ಬೆಂಗಳೂರು ತೊರೆಯುತ್ತಿದ್ದಾರೆ. ಅದಕ್ಕೆ ಸರ್ಕಾರ ಏನು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸುದ್ದಿಗಾರರನ್ನೇ ಮರು ಪ್ರಶ್ನಿಸಿದರು. ವಲಸೆ ತಡೆಯುವ ಕುರಿತು ಸಾಕಷ್ಟು ಚರ್ಚೆ ನಡೆದಿದೆ. ಹೂರಗಿನವರು ಎನ್ನಲಾದ ಸುಮಾರು 25 ರಿಂದ30 ಲಕ್ಷ ಜನ ಇದ್ದಾರೆ. ಎಲ್ಲರಲ್ಲೂ ವಿಶ್ವಾಸ ಮೂಡಿಸುವ ಪ್ರಯತ್ನ ಮಾಡುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸೋಮಣ್ಣ, ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ. ಮೊದಲು ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ಜೊತೆ ಕೈ ಜೊಡಿಸಲಿ ಎಂದು ಸಲಹೆ ನೀಡಿದರು. ಪಿಪಿಇ ಕಿಟ್‍ಗಳನ್ನು 560 ಕೋಟಿ ರೂಪಾಯಿ ವೆಚ್ಚದಲ್ಲಿ ಖರೀದಿ ಮಾಡಲಾಗಿದೆ.

ಸಿದ್ದರಾಮಯ್ಯ ಅವರು 2500 ಕೋಟಿ ಅವ್ಯವಹಾರ ನಡೆದಿದೆ ಎಂದು ಅವರು ಆರೋಪ ಮಾಡಿದ್ದಾರೆ. ಉಳಿದ ಹಣ ಎಲ್ಲಿಂದ ಬರ ಬೇಕು ಎಂದು ಪ್ರಶ್ನಿಸಿದರು. ಸಿದ್ಧರಾಮಯ್ಯ ತಮ್ಮ ಜವಾಬ್ದಾರಿಯನ್ನು ಮರೆತು ಮಾತನಾಡಿದ್ದಾರೆ. ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಗೌರವ ಕೊಟ್ಟು ಕೆಲಸ ಮಾಡಲಿ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಣ್ಣ ತಪ್ಪು ನೆಡೆದಿಲ್ಲ ಎಂದು ಸಮರ್ಥಿಸಿಕೊಂಡರು.

ವಸತಿ ಯೋಜನೆಗೆ ಮುಖ್ಯಮಂತ್ರಿಯವರು 20 ಸಾವಿರ ಕೋಟಿ ಹಣ ನೀಡಿದ್ದಾರೆ. ನಮ್ಮ ಸರ್ಕಾರ ಬಂದ ಮೇಲೆ ವಸತಿ ಯೋಜನೆಗೆ ಮುಖ್ಯಮಂತ್ರಿಗಳು ಸಾಕಷ್ಟು ಒತ್ತು ನೀಡಿದ್ದಾರೆ. ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ 5 ಲಕ್ಷ 40 ಸಾವಿರ ಮನೆಗಳಿಗೆ ಮುಂಜುರಾತಿ ನೀಡಲಾಗಿದೆ.

ಈಗಾಗಲೇ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ರಾದ ಜೆ.ಸಿ.ಮಾಧುಸ್ವಾಮಿ ಹಾಗೂ ನಿಮ್ಮ ನಡುವೆ ವೈಷಮ್ಯ ಇದ್ದು ನೀವು ತುಮಕೂರು ಉಸ್ತುವಾರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬಗ್ಗೆ ಸುದ್ದಿ ಹರಿದಾಡುತ್ತಿದೆ ಎಂದು ಸುದ್ದಿಗಾರರು ಕೇಳಿದಾಗ ಉತ್ತರಿಸಿದ ಅವರು, ಸದ್ಯಕ್ಕೆ ಅ ಸ್ಥಾನ ಈಗ ಖಾಲಿ ಇಲ್ಲ ಅಂತಹ ಗಲಾಟೆ ಏನು ನೆಡೆದಿಲ್ಲಾ ಎಂದು ನಯವಾಗಿ ಜಾರಿ ಕೊಂಡರು.

ಸಂಸದರಾದ ಜಿ.ಎಸ್.ಬಸವರಾಜು, ನಗರದ ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Facebook Comments

Sri Raghav

Admin