ನಾಳೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ. 25- ಪದವಿ ಕಾಲೇಜು ವಿದ್ಯಾರ್ಥಿಗಳು, ಭೋಧಕ ಸಿಬ್ಬಂದಿ ಹಾಗೂ ಬೆಂಬಲ ಸಿಬ್ಬಂದಿಯವರಿಗೆ ನಾಳೆ ಮತ್ತು ಜೂ. 27ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಇರುವ ಎಲ್ಲಾ ಲಸಿಕಾರಣ ಕೇಂದ್ರಗಳಲ್ಲಿ ಕೋವಿಡ್ ಲಸಿಕಾಕರಣ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ‌ಕೆ. ಶ್ರೀನಿವಾಸ್ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ಲಸಿಕಾಕರಣ ನಡೆಸಲಾಗುತ್ತಿದ್ದು, ಸರ್ಕಾರದ ಮಾರ್ಗಸೂಚಿಗಳನ್ವಯ ಮುಂದಿನ ತಿಂಗಳಿಂದ ಕಾಲೇಜುಗಳು ಪ್ರಾರಂಭವಾಗುವ ಸಾಧ್ಯತೆ ಇರುವದರಿಂದ, ಕಾಲೇಜು ಆರಂಭಕ್ಕೂ ಪೂರ್ವದಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳು, ಭೋಧಕ ಸಿಬ್ಬಂದಿ ಹಾಗೂ ಬೆಂಬಲ ಸಿಬ್ಬಂದಿಯವರಿಗೆ ಲಸಿಕಾಕರಣವನ್ನು ನಡೆಸಲು ಸೂಚಿಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹ 18 ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ಅವರ ಕಾಲೇಜಿನ ಮುಖ್ಯಸ್ಥರ ಸಹಿ ಪಡೆದಿರುವ ಪತ್ರದೊಂದಿಗೆ ಲಸಿಕಾಕರಣ ಕೇಂದ್ರಕ್ಕೆ ಹಾಜರಾಗಿ ಕೋವಿಡ್ ಲಸಿಕೆ ಪಡೆಯಬಹುದು.

‌‌‌ವಿಶೇಷವಾಗಿ 18 ವರ್ಷ ಮೀರಿದ ಸಿಇಟಿಪರೀಕ್ಷೆ ಬರೆಯಲು ಸನ್ನದ್ಧರಾಗಿರುವ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾಭ್ಯಾಸ ಮತ್ತು ಉದ್ಯೋಗದ ನಿಮಿತ್ತ ಹೊರದೇಶಗಳಿಗೆ ತೆರಳುತ್ತಿರುವವರು ಸಹ ಈ ದಿನಗಳಂದು ಲಸಿಕಾ ಕೇಂದ್ರಗಳಿಗೆ ಹಾಜರಾಗಿ ಲಸಿಕೆ ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ.

Facebook Comments