ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಬೇಕು : ನಂಜಾವಧೂತ ಸ್ವಾಮೀಜಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಕಳೆದ 30 ವರ್ಷದಿಂದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಒಕ್ಕಲಿಗ ಸಮುದಾಯಕ್ಕೆ ಸಂವಿಧಾನದ ಆಶಯಗಳ ತಕ್ಕಂತೆ ಮೀಸಲಾತಿ ನೀಡಬೇಕು ಎಂದು ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿಮಠದ ಮಠಾಧೀಶ ನಂಜಾವಧೂತ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಸೋಮವಾರ ಒಕ್ಕಲಿಗ ಸಂಘದ ಕುವೆಂಪು ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಒಕ್ಕಲಿಗರ ಮೀಸಲಾತಿ-ಸಮುದಾಯದ ಜೀವಶಕ್ತಿ’ ಕುರಿತು ಬೃಹತ್ ಸಭೆಯಲ್ಲಿ ಶ್ರೀಗಳು ಮಾತನಾಡಿದರು.

ರಾಜ್ಯ ಸರ್ಕಾರವು ಬರುವ ಬಜೆಟ್‌ನಲ್ಲಿ ಒಕ್ಕಲಿಗ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಒಂದು ಸಾವಿರ ಕೋಟಿ ರೂ. ಅನುದಾನ ಮೀಸಲಿಡಬೇಕು. ಸಮುದಾಯದ ಎಲ್ಲ 115 ಪಂಗಡಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಶ್ರೀಗಳು ಹೇಳಿದರು.

Facebook Comments

Sri Raghav

Admin