ವಾಣಿವಿಲಾಸ ಸಾಗರ ಪ್ರವೇಶ ನಿರ್ಬಂಧ

ಈ ಸುದ್ದಿಯನ್ನು ಶೇರ್ ಮಾಡಿ

ಹಿರಿಯೂರು, ಅ.27- ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯದ ಮೇಲೆ ಸಾರ್ವಜನಿಕರಿಗೆ ಶುಕ್ರವಾರದಿಂದ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ವಾಣಿವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ ಸುಮಾರು 92 ಅಡಿಗೆ ಏರಿದ್ದು, ಇಷ್ಟೊಂದು ಪ್ರಮಾಣದ ನೀರು ಬಂದಿರುವುದನ್ನು ಕುತೂಹಲದಿಂದ ನೋಡಿ ಕಣ್ತುಂಬಿಕೊಳ್ಳಲು ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಜಲಾಶಯಕ್ಕೆ ಸಾರ್ವಜನಿಕರು ಲಗ್ಗೆ ಹಾಕಿದ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಠಿಯಿಂದ ಅಣೆಕಟ್ಟೆಯ ಎರಡೂ ಬದಿಯಲ್ಲಿ ಮರದ ಫೋಲುಗಳನ್ನು ಕಟ್ಟಿ ಸಾರ್ವಜನಿಕರು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.

ಜಲಾಶಯಕ್ಕೆ ಭೇಟಿ ನೀಡುತ್ತಿರುವ ಸಾರ್ವಜನಿಕರು ಹಾಗೂ ಯುವಕರು ಅಣೆಕಟ್ಟೆಯ ತಡೆಗೋಡೆಗಳನ್ನು ಹತ್ತಿ ಫೋಟೋ ಹಾಗೂ ಸೆಲ್ಪಿಗಳನ್ನು ತೆಗೆದುಕೊಳ್ಳುತ್ತಿರುವುದು ಕಂಡು ಬಂದಿದ್ದು, ಇದರಿಂದ ನಿರ್ಬಂಧ ವಿಧಿಸಲಾಗಿದೆ ಎಂದರು.

Facebook Comments