ವರವರರಾವ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಮುಂಬೈ, ಮಾ.7- ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪ ಹೊತ್ತಿರುವ ಖ್ಯಾತ ಕವಿ ಹಾಗೂ ಸಾಮಾಜಿಕ ಕಾರ್ಯಕರ್ತ ವರವರರಾವ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಬಂತರಾಗಿದ್ದ 82 ವರ್ಷದ ವರವರರಾವ್ ಅವರ ಆರೋಗ್ಯದ ದೃಷ್ಟಿಯಿಂದ ಬಾಂಬೆ ಹೈಕೋರ್ಟ್ ವೈದ್ಯಕೀಯ ಚಿಕಿತ್ಸೆ ಪಡೆಯಲು 6 ತಿಂಗಳ ಮಧ್ಯಂತರ ಜಾಮೀನು ನೀಡಿತ್ತು.
2018ರಲ್ಲಿ ಬಂತರಾಗಿದ್ದ ರಾವ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಕಳೆದ ನವೆಂಬರ್ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾವ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್ 50 ಸಾವಿರ ನಿಶ್ಚಿತ ಠೇವಣಿ ಹಾಗೂ ಇಬ್ಬರು ವ್ಯಕ್ತಿಗಳ ಭದ್ರತೆ ಆಧಾರದ ಮೇಲೆ ಮಧ್ಯಂತರ ಜಾಮೀನು ನೀಡಿತ್ತು.
ಬಾಂಬೆ ಬಿಟ್ಟು ಹೊರ ಹೋಗಬಾರದು. ಎನ್ಐಎ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಕೋರ್ಟ್ ಸೂಚನೆ ನೀಡಿತ್ತು. ಜಾಮೀನು ಪಡೆದ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾವ್ ಅವರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.