ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ : ಇಬ್ಬರು ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.5- ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕೋಲಾರ ಜಿಲ್ಲಾ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ವಶದಲ್ಲಿರುವ ಇಬ್ಬರ ಪೈಕಿ ಒಬ್ಬಾತ ಬೆಂಗಳೂರಿನವನು ಎಂಬುದು ಗೊತ್ತಾಗಿದೆ.

ವರ್ತೂರು ಪ್ರಕಾಶ್ ಅಪಹರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 18 ಮಂದಿಯನ್ನು ವಿಚಾರಣೆಗೊಳಪಡಿಸಿ ಪೊಲೀಸರು ಕೆಲವು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಫಾರಂಹೌಸ್ ಬಳಿ ವರ್ತೂರು ಪ್ರಕಾಶ್ ಅವರನ್ನು ಹಣ ಕ್ಕಾಗಿ ಅಪಹರಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಅಪಹರಣಕಾರರ ಸುಳಿವಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಪಹರಣಕಾರರ ಪತ್ತೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಒಂದು ತಂಡ ಪುಣೆಗೆ ಮತ್ತೊಂದು ತಂಡ ಆಂಧ್ರಪ್ರದೇಶಕ್ಕೆ ತೆರಳಿ ಆರೋಪಿಗಳ ಬಗ್ಗೆ ಮಾಹಿತಿ ತಲೆ ಹಾಕುತ್ತಿದೆ.

ಅಪಹರಣದ ಹಿಂದೆ ಸ್ಥಳೀಯರ ಕೈವಾಡವಿರುವುದು ಕಂಡು ಬಂದಿದೆ. ಕೂಡಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Facebook Comments