ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ವಿರುದ್ಧ ವಾಟಾಳ್ ಗುಡುಗು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.26- ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋ ನೀತಿ ಖಂಡಿಸಿ ಕನ್ನಡ ಒಕ್ಕೂಟದ ವತಿಯಿಂದ ರಾಮನಗರದ ಐಜೂರ್ ವೃತ್ತದಲ್ಲಿಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಕನ್ನಡ ಸೇನೆಯ ಕೆ.ಆರ್.ಕುಮಾರ್, ಕನ್ನಡ ಜಾಗೃತಿ ವೇದಿಕೆಯ ಅಧ್ಯಕ್ಷ ಮಂಜುನಾಥ್ ದೇವು, ಎಚ್.ಡಿ.ಗಿರೀಶ್‍ಗೌಡ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೀತಿಯನ್ನು ಖಂಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಸರ್ಕಾರಗಳು ರೈತರಿಗೆ ವಿರುದ್ಧವಾದ ಕಾಯ್ದೆಗಳನ್ನು ಜಾರಿಗೊಳಿಸಿದೆ. ಈ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಿವೆ. ಕೂಡಲೇ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಹೇಳಿದರು.

ರೈತರ ಹೆಸರಿನಲ್ಲಿ ಅಕಾರಕ್ಕೆ ಬರುವ ಸರ್ಕಾರಗಳು ರೈತ ವಿರೋ ನಿಲುವುಗಳನ್ನು ತಾಳುತ್ತ್ತಿರುವುದನ್ನು ಕನ್ನಡ ಒಕ್ಕೂಟ ಖಂಡಿಸುತ್ತದೆ. ಒಕ್ಕೂಟದ ವತಿಯಿಂದ ಇದರ ವಿರುದ್ಧ ನಿರಂತರ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಮೇಕೆದಾಟು ಯೋಜನೆ ಕೂಡ ನೆನೆಗುದಿಗೆ ಬಿದ್ದಿದ್ದು, ಯೋಜನೆ ಜಾರಿ ಮಾಡಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದರು. ಸಾ.ರಾ.ಗೋವಿಂದು ಮಾತನಾಡಿ, ಯೋಜನೆಗಳನ್ನು ವಿರೋಸಿ ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಸದಾ ನಮ್ಮ ಬೆಂಬಲವಿದೆ.

ಸಾಂಕೇತಿವಾಗಿ ನಾವು ರಸ್ತೆ ತಡೆ ನಡೆಸಿದ್ದೇವೆ. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

Facebook Comments

Sri Raghav

Admin