ಬೆಲೆ ಏರಿಕೆ ವಿರುದ್ಧ ವಾಟಾಳ್ ಗುಡುಗು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.16- ಆಹಾರ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ತಕ್ಷಣವೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಳಿಸಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ , ಅಕ್ಕಿ, ರಾಗಿ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.

ಬೆಲೆಯ ಏರಿಕೆಯ ಭೂತಕ್ಕೆ ಉಪ್ಪಿನ ಅಭಿಷೇಕ ಮಾಡಿ ನಾಳೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುವುದಾಗಿ ಅವರು ತಿಳಿಸಿದರು.ಮುಖ್ಯಮಂತ್ರಿ , ಸಚಿವರು, ಸಂಸದರು, ಶಾಸಕರಿಗೆ ಬೆಲೆ ಏರಿಕೆಯಾಗಿರುವುದು ಗೊತ್ತಿಲ್ಲವೇ? ವಿರೋಧ ಪಕ್ಷಗಳು ಕೂಡ ಬೆಲೆ ಏರಿಕೆಯ ವಿರುದ್ಧ ಧ್ವನಿ ಎತ್ತುತ್ತಿಲ್ಲ. ಇದರಿಂದಾಗಿ ಜನಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ.

ಬೆಲೆ ಏರಿಕೆಯನ್ನು ವಿರೋಧ ಪಕ್ಷಗಳು ಗಂಭೀರವಾಗಿ ಪರಿಗಣಿಸಿ ಒಗ್ಗೂಡಿ ಹೋರಾಟ ಮಾಡಬೇಕು. ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಿ ನಾನು ಜೈಲಿಗೆ ಹೋಗಲು ಸಿದ್ಧ ಎಂದು ತಿಳಿಸಿದರು.

Facebook Comments

Sri Raghav

Admin