ಹಿಂದಿ ಹೇರಿಕೆ ವಿರೋಧಿಸಿ ಭಾನುವಾರ ವಾಟಾಳ್ ವಿನೂತನ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.17- ಹಿಂದಿ ಹೇರಿಕೆಯನ್ನು ಪ್ರಬಲವಾಗಿ ವಿರೋಧಿಸಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಕನ್ನಡಪರ ಸಂಘಟನೆಗಳೊಂದಿಗೆ ಭಾನುವಾರ ವಿನೂತನ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದ ಬಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿರುವ ಸರ್ಕಾರದ ವಿರುದ್ಧ ಭೂತದಹನ ಮಾಡುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ.

ಹಿಂದಿ ಹೇರಿಕೆ ಮೂಲಕ ಕನ್ನಡದ ಮೇಲೆ ಕೇಂದ್ರ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ. ಸರ್ಕಾರಿ ಸ್ವಾಮ್ಯದ ಕಚೇರಿಗಳು, ಖಾಸಗಿ ಕಂಪೆನಿಗಳು ಕನ್ನಡದ ಪರವಾಗಿರಬೇಕು. ಕನ್ನಡದಲ್ಲೇ ವ್ಯವಹರಿಸಬೇಕು. ಈ ಮೂಲಕ ಕನ್ನಡದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಬೇಕು. ಹಿಂದಿ ಕಲಿಕೆಯ ಭಾಷೆಯಾದರೆ ಪರವಾಗಿಲ್ಲ. ಆದರೆ, ಅದು ನಮ್ಮ ಮೇಲೆ ಹೇರಿಕೆಯಾಗಬಾರದು. ಇದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.

ಹಿಂದಿ ದಿವಸ್ ಆಚರಣೆ ಮೂಲಕ ಕನ್ನಡ ಭಾಷೆಯನ್ನು ಹಂತ ಹಂತವಾಗಿ ನಶಿಸುವ ಕೆಲಸವನ್ನು ಮಾಡಲಾಗುತ್ತಿದೆ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕಿದೆ ಎಂದು ಅವರು ಹೇಳಿದರು. ಕನ್ನಡ ಭಾಷೆಗೆ ಎರಡೂವರೆ ವರ್ಷಗಳ ಇತಿಹಾಸವಿದೆ. ಹಿಂದಿ ಹುಟ್ಟುವ ಮೊದಲೇ ಕನ್ನಡ ಭಾಷೆ ಹುಟ್ಟಿದೆ. ಈ ಭಾಷೆಯನ್ನು ಉಳಿಸಿ ಬೆಳೆಸಬೇಕು. ನಾವೆಲ್ಲರೂ ನಿರಂತರವಾಗಿ ಬಳಸುವ ಮೂಲಕ ಕನ್ನಡವನ್ನು ಎತ್ತಿ ಹಿಡಿಯಬೇಕು ಎಂದು ಹೇಳಿದರು.

Facebook Comments