ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ವಾಟಾಳ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ 08 -ದೇಶದಲ್ಲಿ ಪೆಟ್ರೋಲ್ ಡೀಸೆಲ್‌ ಅನಿಲ ಬೆಲೆ ಏರಿಕೆ ವಿರುದ್ದ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ರವರು ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡುರಸ್ತೆಯಲ್ಲಿ ಕುಳಿತು ಬೆಲೆ ಏರಿಕೆ ಖಂಡಿಸಿದರು.

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನ ಕೂಡ ಆರೋಗ್ಯದ ದೃಷ್ಟಿಯಿಂದ ಪಾಸ್ ಮಾಡಬೇಕೆಂದು ಶಿಕ್ಷಣ ಸಚಿವರನ್ನ ಒತ್ತಾಯಿಸಿದರು. ಪಿಯುಸಿ ರಿಪಿಟರ್ಸ್ ಹಾಗು ಖಾಸಗಿ ವಿದ್ಯಾರ್ಥಿಗಳನ್ನ ಪಾಸ್ ಮಾಡಬೇಕೆಂದು ವಾಟಾಳ್ ಒತ್ತಾಯ.

ಶಿಕ್ಷಣ ಸಚಿವರ ಮನೆಮುಂದೆ ನಡೆಸಿದ ಪ್ರತಿಭಟನೆ ಹಿನ್ನೆಲೆ ವಾಟಾಳ್ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಐಫ್ ಐ ಆರ್ ಹಾಕಲಿ ಜೈಲಿಗೆ ಕಳುಹಿಸಲಿ ಯಾವುದಕ್ಕು ಜಗ್ಗದೆ ವಿದ್ಯಾರ್ಥಿಗಳಿಗಾಗಿ ಹೋರಾಟ ನಡೆಸುವುದಾಗಿ ವಾಟಾಳ್ ಗುಡುಗಿದ್ದಾರೆ.

Facebook Comments