ಪಿಯುಸಿ ವಿದ್ಯಾರ್ಥಿಗಳನ್ನ ಪರೀಕ್ಷೆ ನಡೆಸದೆ ಪಾಸ್ ಮಾಡಿ : ವಾಟಾಳ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ 03 -ಎಸ್ ಎಸ್ ಎಲ್ ಸಿ ಹಾಗು ಪಿಯುಸಿ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂದು ಆಗ್ರಹಿಸಿ ವಿಧಾನಸೌಧದ ಮುಂದೆ ವಾಟಾಳ್ ಪ್ರತಿಭಟನೆ. ಕೇಂದ್ರ ಸರ್ಕಾರವು ಕೂಡ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಐಸಿಎಸ್ಇ ಹಾಗು ಸಿಬಿಎಸ್ಇ ಪರೀಕ್ಷೆಗಳನ್ನ ಪಾಸ್ ಮಾಡಿದೆ.

ರಾಜ್ಯದ ಮುಖ್ಯಮಂತ್ರಿ ಹಾಗು ಶಿಕ್ಷಣ ಮಂತ್ರಿ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಯ ಲಾಬಿಗೆ ಮಣಿಯದೆ ಕೂಡಲೇ ಪರೀಕ್ಷೆ ರದ್ದತಿ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ವಿಧಾನಸೌಧದ ಮುಂದೆ ಆಗ್ರಹಿಸಿದರು.

ವಿದ್ಯಾರ್ಥಿಗಳ ಜೀವ ಅತ್ಯಮೂಲ್ಯ ಹಾಗಾಗಿ ಕೊರೋನಾ ಮಹಾಮಾರಿಯಿಂದ ವಿದ್ಯಾರ್ಥಿಗಳನ್ನ ಪಾರು ಮಾಡಬೇಕಾದರೆ ಪರೀಕ್ಷೆ ಇಲ್ಲದೆ ಪಾಸ್ ಮಾಡಿ ಪಾಸ್ ಮಾಡಿ ಪಾಸ್ ಮಾಡಿ.

Facebook Comments