ಶ್ರೀಲಂಕಾ ಸ್ಫೋಟದಲ್ಲಿ ಮೃತಪಟ್ಟವರ ಮನೆಗಳಿಗೆ ಮೊಯ್ಲಿ ಭೇಟಿ, ಸಾಂತ್ವನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.22-ಶ್ರೀಲಂಕಾದ ಸರಣಿ ಬಾಂಬ್ ಸ್ಫೋಟದಿಂದ ಮೃತಪಟ್ಟಿರುವ ಏಳು ಜನರ ಪೈಕಿ ನಾಲ್ವರ ಮೃತದೇಹಗಳು ಗುರುತು ಪತ್ತೆಯಾಗಿದ್ದು, ಉಳಿದಂತೆ ಶಿವಕುಮಾರ್, ಪುಟ್ಟರಾಜು, ಮರಿಗೌಡ ಅವರ ಗುರುತು ಪತ್ತೆಯಾಗಬೇಕಿದೆ ಎಂದು ಕೇಂದ್ರ ಮಾಜಿ ಸಚಿವ ಹಾಗೂ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಹನುಮಂತರಾಯಪ್ಪ ಅವರ ಮನೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾರ್ಥಿವ ಶರೀರಗಳ ಗುರುತು ಸಿಕ್ಕ ಬಳಿಕ ಅವುಗಳನ್ನು ರಾಜ್ಯಕ್ಕೆ ತರಲಾಗುವುದು.

ಈಗಾಗಲೇ ಒಬ್ಬ ಶಾಸಕರು ಶ್ರೀಲಂಕಾಗೆ ತೆರಳಿದ್ದು, ಮತ್ತೊಬ್ಬರು ಹೋಗಲಿದ್ದಾರೆ. ಮೃತರ ಸಂಬಂಧಿಕರು ಕೂಡ ಶ್ರೀಲಂಕಾಗೆ ತೆರಳುತ್ತಿದ್ದಾರೆ. ಜೊತೆಗೆ ಅಲ್ಲಿರುವ ಪರಿಚಯಸ್ಥರ ಮೂಲಕ ಮೃತರ ದೇಹಗಳನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ವಿದೇಶಾಂಗ ಸಚಿವೆ ಸುಷ್ಮಾಸ್ವರಾಜ್ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ ಮೊಯ್ಲಿ ಅವರು, ಮೃತರ ಮಾಹಿತಿಯನ್ನು ಖಚಿತಪಡಿಸಿಕೊಂಡರು.

ಕೇಂದ್ರ ಸರ್ಕಾರದ ತುರ್ತು ಕಾರ್ಯಚಟುವಟಿಕೆಗಳ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಸರಣಿ ಸ್ಫೋಟದಲ್ಲಿ ತೊಂದರೆಗೀಡಾಗಿರುವವರಿಗೆ ಇನ್ನಷ್ಟು ನೆರವು ನೀಡುವಂತೆ ಮನವಿ ಮಾಡಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin