ನೀರು ಕಳುಹಿಸಿದ್ದಕ್ಕೆ ಬಿಬಿಎಂಪಿಗೆ ಪತ್ರ ಬರೆದು ಧನ್ಯವಾದ ತಿಳಿಸಿದ ವೀರೇಂದ್ರ ಹೆಗ್ಗಡೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ. 22- ಮಂಜುನಾಥ ಸನ್ನಿಧಿಗೆ ಕುಡಿಯುವ ನೀರು ಪೂರೈಕೆ ಮಾಡಿರುವುದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಬಿಬಿಎಂಪಿ ಮೇಯರ್‍ಗೆ ಪತ್ರ ಬರೆದು ಧನ್ಯವಾದ ಅರ್ಪಿಸಿದ್ದಾರೆ.

ನಿನ್ನೆಯಷ್ಟೆ ಬಿಬಿಎಂಪಿ ನೌಕರರ ಸಂಘ 75ಸಾವಿರ ಲೀಟರ್ ಕುಡಿಯುವ ನೀರನ್ನು ಧರ್ಮಸ್ಥಳಕ್ಕೆ ಕಳುಹಿಸಿತ್ತು. ಇದಕ್ಕೆ ಕೃತಜ್ಞತೆ ಸಲ್ಲಿಸಿ ವೀರೇಂದ್ರ ಹೆಗಡೆಯವರು ಪತ್ರ ಬರೆದಿದ್ದಾರೆ.

ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿದ್ದೀರಿ ಇದಕ್ಕೆ ನಾನು ಆಭಾರಿಯಾಗಿದ್ದೇನೆ. ಸಮಾಜ ಸೇವೆ ಮಾಡಿದ ನಿಮಗೆ ಶ್ರೀ ಮಂಜುನಾಥ ಸ್ವಾಮಿ ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿ ಅವರು, ಬಿಬಿಎಂಪಿ ಮೇಯರ್ ಗಂಗಾಂಬಿಕೆ ಹಾಗೂ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಪತ್ರ ಬರೆದಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ