ವಾಹನಗಳಿಗೆ ಸಂಬಂಧಿಸಿದಂತೆ ಬಜೆಟ್ ನಲ್ಲಿ ಮಹತ್ವದ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.8-ಅಕೃತ ವಾಹನ ಸ್ಕ್ರಾಪಿಂಗ್ ಸೌಲಭ್ಯ ಸ್ಥಾಪಿಸಲು ಮತ್ತು ನಿರ್ವಹಿಸಲು ಕೇಂದ್ರ ಸರ್ಕಾರ ಕರಡು ಮಾರ್ಗಸೂಚಿ ನೀಡಿದ್ದು, ಅದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ವಾಹನ ಸ್ಕ್ರಾಪಿಂಗ್ ಸೌಲಭ್ಯವನ್ನು ಜಾರಿಗೆ ತರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಸಾರ್ವಜನಿಕರಿಗೆ ಸಾರಿಗೆ ಇಲಾಖೆಯಿಂದ ಹೆಚ್ಚಿನ ಸೌಲಭ್ಯ ನೀಡಲು 52 ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗುವುದು, 16 ಬಸ್ ಘಟಕಗಳನ್ನು ಸ್ಥಾಪಿಸಲಾಗುವುದು. ಬೆಳಗಾವಿ, ಧಾರವಾಡ, ಮಂಗಳೂರು, ರಾಯಚೂರು, ಹಾಸನಗಳಲ್ಲು ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು.

ಧಾರವಾಡ ಮತ್ತು ಮೈಸೂರಿನಲ್ಲಿ ವಾಹನ ತಪಾಸಣಾ ಮತ್ತು ಪ್ರಮಾಣೀಕರಣ ಕೇಂದ್ರಗಳನ್ನು ಈ ವರ್ಷದಲ್ಲಿಯೇ ಆರಂಭಿಸಲಾಗುವುದು ಎಂದರು. ವಾಹನ ಮಾಲೀಕತ್ವ ವರ್ಗಾವಣೆ, ಸರಕು-ಸಾಗಾಣಿಕೆ ರಹದಾರಿ, ವಾಹನಗಳ ಅರ್ಹತಾ ಪತ್ರ ನೀಡುವ ಮೂರು ಸೇವೆಗಳನ್ನು ಸಂಪರ್ಕ ರಹಿತ, ಮುಖರಹಿತ ಮತ್ತು ನಗದು ರಹಿತ ವ್ಯವಸ್ಥೆ ಮೂಲಕ ಸಾರ್ವಜನಿಕರಿಗೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು.

[ ಕರ್ನಾಟಕ ಬಜೆಟ್ – 2021 (All Updates) ]

ವಾಹನ ನೋಂದಣಿಗಾಗಿ ವಾಹನ ತಂತ್ರಾಂಶ ಮತ್ತು ಅನುಜ್ಞಾ ಪತ್ರಗಳಿಗಾಗಿ ಸಾರಥಿ ತಂತ್ರಾಂಶ ಸೇವೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಜನರಿಗೆ ಒದಗಿಸಲು ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಸಾರಿಗೆ ಇಲಾಖೆಯ ಅೀನದಲ್ಲಿ ರಾಜ್ಯ ವ್ಯಾಪಿ ಇರುವ 66 ಕಚೇರಿಗಳಲ್ಲಿನ ಹಳೆಯ ದಾಖಲಾತಿಗಳನ್ನು ಡಿಜಿಟಲೀಕರಣಗೊಳಿಸಿ ಕಾಗದ ರಹಿತ ಇಲಾಖೆಯನ್ನಾಗಿ ಮಾಡಲಾಗುವುದು.

ವಾಯುಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ವಾಹನಗಳ ನೋಂದಣಿ ಸಂದರ್ಭದಲ್ಲಿ ಸಂಗ್ರಹಿಸುವ ಹಸಿರು ತೆರಿಗೆಯಿಂದ ಸಂಚಾರ ವ್ಯವಸ್ಥೆಯಲ್ಲಿ ಶಿಸ್ತುಬದ್ಧ ಸಾರಿಗೆ ವ್ಯವಸ್ಥೆ ಅಳವಡಿಸಲು ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

Facebook Comments

Sri Raghav

Admin