ಮೋಜಿಗಾಗಿ ವಾಹನಗಳನ್ನು ಕದಿಯುತ್ತಿದ್ದ ಆರೋಪಿ ಅರೆಸ್ಟ್, 3.50 ಲಕ್ಷ ಮೌಲ್ಯದ ಬೈಕ್ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.14- ಮೋಜಿನ ಜೀವನ ನಡೆಸಲು ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಜ್ಞಾನಭಾರತಿ ಠಾಣೆ ಪೊಲೀಸರು 3.50 ಲಕ್ಷ ಬೆಲೆಯ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ತಮಿಳುನಾಡಿನ ಸಂಪತ್ (26) ಬಂಧಿತ ಆರೋಪಿ. ಈತ ಡಿಪ್ಲೊಮಾ ಮೆಕ್ಯಾನಿ ಕಲ್ ವ್ಯಾಸಂಗ ಮಾಡಿದ್ದು, ಮೋಜಿ ಗಾಗಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದನೆಂದು ಆಪೊಲೀಸರು ತಿಳಿಸಿದ್ದಾರೆ.

ಮನೆ ಮುಂದೆ ನಿಲ್ಲಿಸಿದ್ದ ಪಲ್ಸರ್ ದ್ವಿಚಕ್ರ ವಾಹನವನ್ನು ಯಾರೋ ಕಳವು ಮಾಡಿಕೊಂಡು ಹೋಗಿದ್ದರೆಂದು ಮಾಲೀಕರು ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದರು. ಇನ್ಸ್‍ಪೆಕ್ಟರ್ ಲಕ್ಷ್ಮಣ್ ನಾಯಕ್ ಮತ್ತು ಸಿಬ್ಬಂದಿ ಆರೋಪಿ ಸಂಪತ್‍ನನ್ನು ಪತ್ತೆಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಜ್ಞಾನಭಾರತಿ, ವಿಜಯನಗರ, ಮಾಗಡಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕಳವು ಮಾಡಿದ್ದ 3.50 ಲಕ್ಷ ಬೆಲೆಯ ನಾಲ್ಕು ಬಜಾಜ್ ಪಲ್ಸರ್ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Facebook Comments