ಮಹದಾಯಿ ನದಿ ನೀರು ಬಳಸಿಕೊಳ್ಳಲು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ, -ನ್ಯಾಯಾಧೀಕರಣ ನೀಡಿದ ತೀರ್ಪಿನಂತೆ ಮಹದಾಯಿ ನದಿ ನೀರು ಬಳಸಿಕೊಳ್ಳಲು ಗೆಜೆಟ್ ನೋಟೀಫಿಕೇಷನ್ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಮಹದಾಯಿ ಹೋರಾಟಗಾರರು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ಇಂದು ಮನವಿ ಸಲ್ಲಿಸಿದರು.

ಮಹದಾಯಿ ಹೋರಾಟಗಾರ ವೀರೇಶ ಸೊರಬದ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಹೋರಾಟಗಾರರು, ನ್ಯಾಯಾಧೀಕರಣ ಕೊಟ್ಟ ತೀರ್ಪಿನಂತೆ ನೀರನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಗೆಜೆಟ್ ನೋಟೀಫಿಕೇಷನ್ ಹೊರಡಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಈ ಸಂಬಂಧ ತಾವು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು. ರಾಜ್ಯದ ಜನರ ನೆರವಿಗೆ ಬರಬೇಕು ಎಂದು ಹೇಳಿದರು.

ರೈತರು ಬೆಳೆದ ಬೆಳೆಗೆ ನಿರಂತರ ಖರೀದಿ ಕೇಂದ್ರ ತೆರೆಯಬೇಕು, ಮಧ್ಯವರ್ತಿಗಳ ಪಾಲಾಗದಂತೆ ನೋಡಿಕೊಳ್ಳಬೇಕು. ನೆರೆ ಹಾವಳಿಗೆ ಉತ್ತರ ಕರ್ನಾಟಕ ತೀವ್ರ ಸಂಕಷ್ಟಕ್ಕೀಡಾಗಿದ್ದು, ಹೆಚ್ಚಿನ ಪರಿಹಾರ ನೀಡುವುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಸಲ್ಲಿಸಲಾಗಿದ್ದು, ನಮ್ಮ ಮನವಿಗೆ ಉಪರಾಷ್ಟ್ರಪತಿಗಳು ಸ್ಪಂದಿಸಿದ್ದಾರೆ ಎಂದು ವಿರೇಶ ಸೊರಬದ ತಿಳಿಸಿದ್ದಾರೆ.

Facebook Comments