ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಘಟ್ಟವಾದ ಗಾಂಧಿ ಚಂಪಾರಣ್ ಸತ್ಯಾಗ್ರಹಕ್ಕೀಗ 100 ವರ್ಷ

ಈ ಸುದ್ದಿಯನ್ನು ಶೇರ್ ಮಾಡಿ

Champaran--01

ನವದೆಹಲಿ, ಏ.10-ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಒಂದು ಪ್ರಮುಖ ಘಟ್ಟವಾದ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಚಂಪಾರಣ್ ಸತ್ಯಾಗ್ರಹಕ್ಕೆ ಈಗ 100 ವರ್ಷ. ಈ ಸಂದರ್ಭದಲ್ಲಿ ರಾಜಧಾನಿ ದೆಹಲಿಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಮತ್ತು ಗಾಂಧಿ ಸತ್ಯಾಗ್ರಹ ಚಳವಳಿ ಕುರಿತ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು.  100 ವರ್ಷಗಳ ಹಿಂದೆ ದೇಶವನ್ನು ಬ್ರಿಟಿಷ್ ಆಡಳಿತದಿಂದ ಸ್ವಚ್ಛಗೊಳಿಸಲು ಗಾಂಧೀಜಿ ಚಂಪಾರಣ್ ಸತ್ಯಾಗ್ರಹ ಚಳವಳಿ ಆರಂಭಿಸಿದ್ದರು. ಈಗ ನಾವು ಸ್ವಚ್ಛ ಭಾರತಕ್ಕಾಗಿ ಆಂದೋಲನ ನಡೆಸುತ್ತಿದ್ದೇವೆ ಎಂದು ಮೋದಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆದ ಇನ್ನೊಂದು ಸಮಾರಂಭದಲ್ಲಿ ಕೇಂದ್ರ ವಾರ್ತಾ ಸಚಿವ ಎಂ.ವೆಂಕಯ್ಯನಾಯ್ಡು ಭಾಗವಹಿಸಿ ಪುಸ್ತಕಗಳನ್ನು ಬಿಡುಗಡೆ ಮಾಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin