ವೈಟಿಪಿಎಸ್ ಕಾರ್ಮಿಕರ ಪ್ರತಿಭಟನೆ ರಾಜಕೀಯ ಪ್ರೇರಿತ : ಸಚಿವ ವೆಂಕಟರಾವ್ ನಾಡಗೌಡ

ಈ ಸುದ್ದಿಯನ್ನು ಶೇರ್ ಮಾಡಿ

ರಾಯಚೂರು,ಜೂ 27-ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಗೊಂದಲ ಸೃಷ್ಠಿಸುವ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಪ್ರತಿಭಟನೆ ನಡೆಸಲಾಯಿತು ಎಂದು ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಆರೋಪಿಸಿದ್ದಾರೆ.

ಗ್ರಾಮವಾಸ್ತವ್ಯಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ನಿನ್ನೆ ವೈಟಿಪಿಎಸ್ ಸಿಬ್ಬಂದಿ ನಡೆಸಿದ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕಾರ್ಮಿಕರಿಗೆ ಮನವಿ ಸಲ್ಲಿಸಲು ಪ್ರವಾಸಿ ಮಂದಿರಲ್ಲಿ ಅವಕಾಶ ಮಾಡಿಕೊಡಲಾಗಿತ್ತು. ಆದರೆ ರಾಜಕೀಯಕ್ಕಾಗಿ ಈ ಸಮಸ್ಯೆಯನ್ನು ಬಳಸಿಕೊಂಡು ಗೊಂದಲ ಸೃಷ್ಠಿಸಿದರು ಎಂದು ಅವರು ಹೇಳಿದರು.

ಮನವಿ ನೀಡಲು ಮುಕ್ತ ಅವಕಾಶವಿದ್ದರೂ ಈ ರೀತಿ ಅಡಚಣೆ ಮಾಡುವ ಪ್ರಮೇಯವಿರಲಿಲ್ಲ. ಇಂತಹ ವಿಷಯಗಳಲ್ಲಿ ರಾಜಕೀಯ ಮಾಡಬಾರದು ಎಂದು ಅವರು ಹೇಳಿದರು. ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ರಾಜಕೀಯ ದ್ವೇಷಗಳನ್ನು ಮಾಡಬಾರದು ಎಂದು ತಿಳಿಸಿದರು.

ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಆದರೂ ರಸ್ತೆಯಲ್ಲಿ ಈ ರೀತಿ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದರ ಹಿಂದೆ ಷಡ್ಯಂತ್ರವಿದೆ ಎಂದು ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ