ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನಕ್ಕೆ ಸಿಎಂ ಬಿಎಸ್‌ವೈ ಸಂತಾಪ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.19- ನಾಡಿನ ಹಿರಿಯ ಭಾಷಾತಜ್ಞ, ಸಂಶೋಧಕ ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ. ವೆಂಕಟಸುಬ್ಬಯ್ಯ ಅವರು ನಿಘಂಟು ರಚನೆಗೆ, ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರೊ. ಜಿ.ವಿ. ಅವರ ಕೊಡುಗೆ ಅನನ್ಯವಾದುದು. ತಮ್ಮ ಸುದೀರ್ಘ ಜೀವಿತಾವಯಲ್ಲಿ ಇಗೋ ಕನ್ನಡ ಸಾಮಾಜಿಕ ನಿಘಂಟು ಸೇರಿದಂತೆ 60 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಅಪೂರ್ವ ಸಾಧನೆಗೈದವರು.

ತಮ್ಮ ಕೊನೆಯ ಅವಧಿಯವರೆಗೂ ಬರವಣಿಗೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಬೆರಗು ಮೂಡಿಸಿದ್ದಾರೆ. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕದ ಅಪೂರ್ವ ರತ್ನವೊಂದು ಮರೆಯಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ. ಅವರ ಕುಟುಂಬ, ಅಪಾರ ಶಿಷ್ಯ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Facebook Comments