ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಜಯಾ ವಿಧಿವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ, ಪೋಷಕ ನಟಿ ಬಿ.ಜಯಾ ಇಂದು ನಿಧನರಾಗಿದ್ದಾರೆ. 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಅವರು ಹಾಸ್ಯ ಪಾತ್ರಗಳ ಮೂಲಕ ಗಮನಸೆಳೆದಿದ್ದರು. ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಬಿ. ಜಯಾ ಸಿನಿಮಾ ಜೊತೆಗೆ ಹಲವಾರು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದಾರೆ. ವರ ನಟ ಡಾ. ರಾಜಕುಮಾರ್ ಅವರ ಹೆಚ್ಚಿನ ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಅವರು ಅಭಿನಯಿಸಿದ್ದಾರೆ.

ಹಾಸ್ಯ ಕಲಾವಿದೆಯಾಗಿದ್ದ ಅವರು, ಕನ್ನಡ ಚಿತ್ರರಂಗ ಹಿರಿಯ ಪೋಷಕ ನಟಿ ಬಿ.ಜಯಾ ಗುರುವಾರದಂದು ಕೊನೆಯುಸಿರು ಎಳೆದಿದ್ದಾರೆ. ಇಂತಹ ಹಿರಿಯ ನಟರೊಂದಿಗೆ ಕಾಣಿಸಿಕೊಂಡಿದ್ದ ನಟಿಯ ಸಾವಿಗೆ ಚಿತ್ರರಂಗವೇ ಕಣ್ಣೀರು ಸುರಿಸಿದೆ.

ಎತ್ತರದಲ್ಲಿ ಕೊಂಚ ಕುಳ್ಳಗಿದ್ದ ಜಯಾ ಅವರು ಕುಳ್ಳಿ ಜಯಾ ಎಂದೇ ಜನಪ್ರಿಯರಾಗಿದ್ದರು. ಸುಮಾರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ ಜನರ ಮನಸ್ಸನ್ನು ಗೆದ್ದಿದ್ದರು.

ಹಾಸ್ಯಮಯ ಪಾತ್ರಗಳಲ್ಲೂ ಕಾಣಿಸಿಕೊಂಡು ಅಭಿಮಾನಿಗಳ ಮೊಗದಲ್ಲಿ ನಗು ಮೂಡಿಸಿದ್ದರು. ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಜಯಾ ಇತ್ತೀಚಿನ ದಿನಗಳಲ್ಲಿ ಕೆಲವು ಧಾರಾವಾಹಿಗಳಲ್ಲೂ ಬಣ್ಣ ಹಚ್ಚಿದ್ದರು.

1944ರಲ್ಲಿ ಜನಿಸಿದ್ದ ಜಯಾ 1958ರಲ್ಲಿ ಭಕ್ತ ಪ್ರಹ್ಲಾದ ಸಿನಿಮಾ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದರು. ಇಂತಹ ಹಿರಿಯ ನಟಿ ಬಿ.ಜಯಾ ಇನ್ನಿಲ್ಲವಾಗಿದ್ದಾರೆ.

ಅನೇಕ ದಿಗ್ಗಜರ ಚಿತ್ರಗಳಲ್ಲಿ ಅಭಿನಯಿಸಿದ ಜಯಾ ಅವರು ನಿಧನದ ಹಿನ್ನಲೆಯಲ್ಲಿ ಸ್ಯಾಂಡಲ್ವುಡ್ ಕಂಬನಿ ಮಿಡಿದಿದೆ.

Facebook Comments

Sri Raghav

Admin