ಮೇಲ್ಮನೆ ಚುನಾವಣೆಗೆ ಬೆಂಗಳೂರು ಜಿಲ್ಲಾಡಳಿತ ಸಜ್ಜು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.8- ವಿಧಾನ ಪರಿಷತ್ ದ್ವೈ ವಾರ್ಷಿಕ ಚುನಾವಣೆ-2021 ಡಿ.10ರಂದು ನಡೆಯಲಿರುವ ಮತದಾನದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ಮತದಾರರು ಕೋವಿಡ್ ಲಸಿಕೆ ಪಡೆದಿರಬೇಕೆಂದು ಸೂಚಿಸಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ.

ನಗರದಲ್ಲಿಂದು ಕೆ.ಜಿ.ರಸ್ತೆಯ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಸಿಬ್ಬಂದಿ, ಮತದಾರರು ಕೋವಿಡ್ ಲಸಿಕೆ ಪಡೆದಿರಬೇಕು ಎಂದು ಸೂಚಿಸಲಾಗಿದೆ. ಈ ಸಂಬಂಧ ಪ್ರಮಾಣ ಪತ್ರವನ್ನು ಸಿಬ್ಬಂದಿ ಪರಿಶೀಲನೆ ನಡೆಸಲಾಗುವುದು ಎಂದರು.

ಈ ಮತದಾನ ಪ್ರಕ್ರಿಯೆಯಲ್ಲಿ ಬ್ಯಾಲೆಟ್ ಕಾಗದ ಮುಖ್ಯವಾಗಿದ್ದು, ಇದನ್ನು ಮತದಾರರು ಹೊರಗಡೆ ತೆಗೆದುಕೊಂಡು ಹೋದರೆ ಅಥವಾ ದುರ್ಬಳಕೆ ಮಾಡಿಕೊಂಡರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಮತದಾರರು ಎಚ್ಚರ ವಹಿಸುವುದು ಸೂಕ್ತ ಎಂದು ತಿಳಿಸಿದರು.

ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಡಿ. 10ರಂದು ನಡೆಯಲಿರುವ ಕಾರಣ ಸಾರ್ವಜನಿಕ ಸಭೆ, ಸಮಾರಂಭಗಳು, ಬೈಕ್ ರ್ಯಾಲಿ, ಬೀದಿ ನಾಟಕ ಮುಂತಾದ ಬಹಿರಂಗ ಪ್ರಚಾರಗಳನ್ನು ಮತದಾನ ಮುಕ್ತಾಯಗೊಳ್ಳುವ 72 ಗಂಟೆಗಳ ಮುಂಚಿತವಾಗಿಯೇ ನಿಲ್ಲಿಸುವಂತೆ ಹಾಗೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಈಗಾಗಲೇ ಸೂಚಿಸಲಾಗಿದೆ ಎಂದು ಹೇಳಿದರು.

ಎಷ್ಟು ಮತಗಟ್ಟೆ?: ಯಲಹಂಕ, ಅನೇಕಲï, ಬೆಂಗಳೂರು ಉತ್ತರ ಸೇರಿದಂತೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 2073 ಮತದಾರರಿದ್ದು, ಮತದಾನ ಪ್ರಕ್ರಿಯೆಗೆ ಒಟ್ಟು 83 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ ಅತೀ ಸೂಕ್ಷ್ಮ ಮೂರು ಮತಗಟ್ಟೆಗಳಿದ್ದು, ಸೂಕ್ಷ್ಮ ಮತಗಟ್ಟೆಗಳು 38 ಇವೆ ಎಂದು ಅವರು ವಿವರಿಸಿದರು.

ಇನ್ನೂ, ಅನಕ್ಷರಸ್ಥ ಮತದಾರರಿಗೆ ಸಹಾಯಕರನ್ನು ಪಡೆದಿರುವ ಸಂಖ್ಯೆಯೂ ಕಡಿಮೆ ಇದೆ. ಮತದಾನ ಪ್ರಕ್ರಿಯೆಗೆ ಮತಗಟ್ಟೆ ಅಕಾರಿಗಳನ್ನು ಕರೆದೊಯ್ಯಲು 17 ಬಿಎಂಟಿಸಿ ಬಸ್ ನಿಯೋಜಿಸಲಾಗಿದೆ. ಅದೇ ರೀತಿಯಲ್ಲಿ ಐದು ತಾಲ್ಲೂಕುಗಳಲ್ಲಿ ಒಟ್ಟು 14 ಸೆಕ್ಟರಲ್ ಅಕಾರಿಗಳು ಹಾಗೂ 15 ಎಂಸಿಸಿ ತಂಡವನ್ನು ರಚಿಸಲಾಗಿದೆ ಎಂದರು.

ಭದ್ರತೆ: ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಪೊಲೀಸರು ಭದ್ರತೆ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದು, ನಾಲ್ವರು ಡಿವೈಎಸ್ಪಿ, 18 ಇನ್ಸ್‍ಪೆಕ್ಟರ್ ಸೇರಿದಂತೆ ಒಟ್ಟು 313 ಪೆಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಇನ್ನೂ ಮತದಾನ ಸಂಬಂಸಿದಂತೆ ಯಾವುದೇ ಮಾಹಿತಿ ಅಥವಾ ಸಹಾಯಕ್ಕಾಗಿ ಸಹಾಯವಾಣಿ 080 22211106 ಅನ್ನು ಸಂಪರ್ಕಿಸಬಹುದು ಎಂದು ಮಂಜುನಾಥ್ ಮಾಹಿತಿ ನೀಡಿದರು.

ನ.14ರಂದು ಮತ ಎಣಿಕೆ: ಮತದಾನ ಪೂರ್ಣಗೊಂಡ ಬಳಿಕ ಡಿ.14ರಂದು ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಅಂದು ಬೆಳಗ್ಗೆ 8 ಗಂಟೆಗೆ ಮತಗಳ ಎಣಿಕೆ ನಡೆಯಲಿದೆ.

Facebook Comments