ಮೇಲ್ಮನೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್ 4 ಕಡೆ ದಿನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.28- ವಿಧಾನಸಭೆಯಿಂದ ವಿಧಾನ ಪರಿಷತ್‍ನ ಒಂದು ಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್ 4 ಕಡೆಯ ದಿನವಾಗಿದೆ. ಈ ಉಪಚುನಾವಣೆಯಲ್ಲಿ ಆಯ್ಕೆಯಾಗುವ ಅದೃಷ್ಟ ಯಾರಿಗಿದೆ ಎಂಬುದನ್ನು ಕಾದು ನೋಡಬೇಕಿದೆ. ಇದುವರೆಗೂ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಲ್ಲ. ಬಹುತೇಕ ಬಿಜೆಪಿ ಅಭ್ಯರ್ಥಿಗೆ ಈ ಸ್ಥಾನ ದೊರೆಯುವುದು ಖಚಿತವಾಗಿದ್ದು, ಇನ್ನೂ ಅಭ್ಯರ್ಥಿ ಆಯ್ಕೆ ಕಸರತ್ತಿನಲ್ಲಿ ಬಿಜೆಪಿ ನಿರತವಾಗಿದೆ.

ಈ ಉಪಚುನಾವಣೆಗೆ ಫೆಬ್ರವರಿ 25ರಂದೇ ಅಸೂಚನೆ ಪ್ರಕಟವಾಗಿದ್ದು, ಅಂದಿನಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದರೂ ಇದುವರೆಗೂ ಯಾವುದೇ ಅಭ್ಯರ್ಥಿ ತಮ್ಮ ಉಮೇದುವಾರಿಕೆ ಸಲ್ಲಿಸಿಲ್ಲ.

ಆಡಳಿತಾರೂಢ ಬಿಜೆಪಿ ವಿಧಾನ ಪರಿಷತ್‍ನ ಉಪಚುನಾವಣೆಯಲ್ಲಿ ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲು ಬೇಕಾದ ಅಗತ್ಯ ಶಾಸಕರ ಬಲವನ್ನು ಹೊಂದಿದೆ. ಆದರೂ ಈತನಕ ವಿಧಾನ ಪರಿಷತ್ ಉಪಚುನಾವಣೆಯ ಅಭ್ಯರ್ಥಿಯನ್ನು ಅಂತಿಮಗೊಳಿಸಿ ಅಕೃತವಾಗಿ ಬಿಜೆಪಿ ಪ್ರಕಟಿಸಿಲ್ಲ.

ವಿರೋಧ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಉಪಚುನಾವಣೆಯಿಂದ ದೂರ ಉಳಿಯುವ ಸಾಧ್ಯತೆಗಳಿವೆ. ಇದುವರೆಗೂ ಈ ಎರಡೂ ಪಕ್ಷಗಳು ಮೇಲ್ಮನೆಯ ಉಪಚುನಾವಣೆಗೆ ಸಂಬಂಸಿದಂತೆ ಯಾವುದೇ ರೀತಿಯ ಚರ್ಚೆ ನಡೆಸಿಲ್ಲ. ಅಲ್ಲದೆ, ಅಕೃತ ನಿರ್ಧಾರ ಕೂಡ ಪ್ರಕಟಿಸಿಲ್ಲ.

ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೂ ಗೆಲ್ಲುವುದು ಸುಲಭವಲ್ಲ. ಬಿಜೆಪಿ ಶಾಸಕರ ಬೆಂಬಲ ಪಡೆಯಬೇಕಾಗುತ್ತದೆ. ವಿಧಾನ ಪರಿಷತ್ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಭಾರತೀಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ.

ಮಾರ್ಚ್ 4ರೊಳಗೆ ನಾಮಪತ್ರ ಸಲ್ಲಿಸಬೇಕಾಗಿದ್ದು, ಮಾರ್ಚ್ 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮಾರ್ಚ್ 8ರ ವರೆಗೂ ಉಮೇದುವಾರಿಕೆ ವಾಪಸ್ ಪಡೆಯಲು ಕಾಲಾವಕಾಶವಿದೆ. ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳು ಚುನಾವಣಾ ಕಣದಲ್ಲೇ ಉಳಿದರೆ ಮಾರ್ಚ್ 15ರಂದು ಮತದಾನ ನಡೆಯಲಿದ್ದು, ಅಂದು ಸಂಜೆ ಮತ ಎಣಿಕೆ ನಡೆದು ಫಲಿತಾಂಶ ಕೂಡ ಪ್ರಕಟವಾಗಲಿದೆ.

Facebook Comments

Sri Raghav

Admin