ಸಿಎಂ ವಿಶ್ವಾಸ ಮತಯಾಚನೆ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತ ಬಿಗಿಭದ್ರತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.22-ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ವಿಶ್ವಾಸ ಮತಯಾಚನೆ ಮಾಡಲಿರುವ ಹಿನ್ನಲೆಯಲ್ಲಿ ವಿಧಾನಸೌಧ ಸುತ್ತ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ.

ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ಒಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು 5 ಮಂದಿ ಡಿಸಿಪಿಗಳು, 20 ಮಂದಿ ಎಸಿಪಿ, 20 ಕೆಎಸ್‍ಆರ್‍ಪಿ, 20 ಸಿಎಆರ್ ತುಕಡಿ ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಅಲ್ಲದೆ ವಾಟರ್‍ಜೆಟ್ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಸಹ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ. ವಿಧಾನಸೌಧ ಸುತ್ತ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆಯಲ್ಲದೆ ರಾಜಭವನದ ಬಳಿಯು ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.

Facebook Comments

Sri Raghav

Admin