ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿಗೆ ಕೊರೊನಾ

ಈ ಸುದ್ದಿಯನ್ನು ಶೇರ್ ಮಾಡಿ

ಅಹಮದಾಬಾದ್, ಫೆ.15 (ಪಿಟಿಐ)- ವಡೋದರ ಮುನಿಸಿಪಲ್ ಚುನಾವಣಾ ಪ್ರಚಾರ ರ‍್ಯಾಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ತೀವ್ರ ದಣಿದು ಮೂರ್ಚೆ ಹೋಗಿದ್ದ ಕಾರಣ ಅವರನ್ನು ಅಹಮದಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 24 ಗಂಟೆಗಳ ವೈದ್ಯರ ನಿಗಾ ಘಟಕದಲ್ಲಿದ್ದ ಸಿಎಂ ಅವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಎಂದು ವೈದ್ಯರು ತಿಳಿಸಿದ್ದಾರೆ.

ರಾಜಕೀಯ ಚಟುವಟಿಕೆಗಳಲ್ಲಿ ಸಿಎಂ ಅವರು ದಣಿದಿದ್ದಾರೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ದಿನ ವೈದ್ಯ ನಿಗಾ ಘಟಕದಲ್ಲಿರಿಸಿಲಾಗಿತ್ತು, ಭಾನುವಾರ ರಾತ್ರಿ ಆರ್‍ಟಿ-ಪಿಸಿಆರ್ ಟೆಸ್ಟ್‍ಗೆ ಒಳಪಡಿಸಿದಾಗ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಭಾನುವಾರ, ವಡೋದರದ ನಿಜಪುರ ಪ್ರದೇಶದಲ್ಲಿ ಆಯೋಜಿಸಿದ್ದ ಮುಂಬರುವ ಸ್ಥಳೀಯ ಚುನಾವಣೆಗಳ ಪ್ರಚಾರ ಕಾರ್ಯದ ರ್ಯಾಲಿಯಲ್ಲಿ ಭಾಗವಹಿಸಿ ಮುಖ್ಯಮಂತ್ರಿ ರೂಪಾನಿ (64) ಅವರು ಕಾರ್ಯಕ್ರಮ ನಡೆಯುತ್ತಿರುವ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದು ಮೂರ್ಚೆ ಹೋಗಿದ್ದಾರೆ.

ತಕ್ಷಣ ಕಾರ್ಯಕ್ರಮ ರದ್ದುಗೊಳಿಸಿ, ಅಹಮದಾಬಾದ್‍ಗೆ ಕರೆದುತಂದು ಯು.ಎನ್. ಮೆಹತಾ ಆಸ್ಪತ್ರೆಗೆ ಸೇರಿಸಲಾಗಿದೆ. ವಿಪರೀತ ಆಯಾಸ ಹಾಗೂ ನಿರ್ಜಲೀಕರಣದಿಂದಾಗಿ ರೂಪಾನಿ ಅವರು ಮೂರ್ಚೆ ಹೋಗಿದ್ದಾರೆ, ಇನ್ನಾವುದೇ ಸಮಸ್ಯೆಯಿಲ್ಲ. ಅವರ ಆರೋಗ್ಯ ಈಗ ಸುಧಾರಿಸಿದೆ. ಆದರೂ ಅವರನ್ನು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ಸುಧಾರಿಸಿಕೊಳ್ಳಲು ಸಲಹೆ ನೀಡಲಾಗಿದೆ ಎಂದು ವೈದ್ಯ ಆರ್.ಕೆ. ಪಟೇಲ್ ಹೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟೆಲಿಫೋನ್ ಕರೆ ಮಾಡಿ ರೂಪಾನಿ ಅವರ ಆರೋಗ್ಯ ವಿಚಾರಿಸಿದ್ದಾರೆ. ರೂಪಾನಿ ಅವರು ಸಂಪೂರ್ಣವಾಗಿ ಆರೋಗ್ಯ ತಪಾಸಣೆಗೆ ಒಳಗಾಗಿ, ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ವಡೋದರದ ಆರು ಮುನಿಸಿಪಲ್ ಕಾಪೆರ್ರೇಷನ್ ಚುನಾವಣೆಗಳು ಫೆ.21 ರಂದು ಹಾಗೂ ಇತರ ಮುನಿಸಿಪಾಲಿಟಿ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗೆ ಚುನಾವಣೆಗಳು ಫೆ.28 ರಂದು ನಡೆಯಲಿವೆ.

Facebook Comments